June 6, 2026

ಬಂಟ್ವಾಳ: ಕಾರಿನಲ್ಲಿ MDMA ಮಾದಕ ವಸ್ತು ಸಾಗಾಟ: ಮೂವರು ಆರೋಪಿಗಳ ಬಂಧನ

0
image_editor_output_image-1480437995-1780725096587.jpg

ಬಂಟ್ವಾಳ: ಕಾರಿನಲ್ಲಿ ಎಂ.ಡಿ.ಎಂ.ಎ. (MDMA) ಮಾದಕ ದ್ರವ್ಯವನ್ನು ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಟ್ವಾಳ ನಗರ ಠಾಣೆ ಪೊಲೀಸರು ಮೆಲ್ಕಾರ್ ಫೈಓವರ್ ಬಳಿ ಬಂಧಿಸಿದ್ದಾರೆ. ಬಂಧಿತರಿಂದ ಅಂದಾಜು ₹7,64,000 ಮೌಲ್ಯದ ಎಂ.ಡಿ.ಎಂ.ಎ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ.

ಬಂಟ್ವಾಳದ ಪುದು ನಿವಾಸಿ ಜುಬೈರ್ (39), ಸಜಿಪ ಮುನ್ನೂರು ನಿವಾಸಿ ಮೊಹಮ್ಮದ್ ಸವಾದ್ (36) ಹಾಗೂ ಬಿ. ಮೂಡ ನಿವಾಸಿ ಬಿ.ಎಂ. ರಶೀದ್ ಯಾನೆ ಮಾರಿಮುತ್ತು ಬಂಧಿತ ಆರೋಪಿಗಳು. ಕಾರು ತಪಾಸಣೆ ವೇಳೆ ಸಿಕ್ಕಿಬಿದ್ದರು.

ಗುರುವಾರ (ಜೂನ್ 4) ಸಂಜೆ ಬಂಟ್ವಾಳ ನಗರ ಪೊಲೀಸ್ ಠಾಣೆಯ ಉಪ ನಿರೀಕ್ಷಕ (PSI) ಸಂದೀಪ್ ಕುಮಾ‌ರ್ ಶೆಟ್ಟಿ ಹಾಗೂ ಸಿಬ್ಬಂದಿಯವರು ಮೆಲ್ಕಾರ್ ಫೈಓವರ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದರು. ಈ ವೇಳೆ  KA 19 MR 1997 ನೋಂದಣಿಯ ಕಾರನ್ನು ತಡೆದು ನಿಲ್ಲಿಸಿ ಪರಿಶೀಲಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!