June 6, 2026

ನೇರಳಕಟ್ಟೆಯಲ್ಲಿ ನಡೆದಿದ್ದ ಕಳವು ಪ್ರಕರಣ: 11 ಲಕ್ಷ ಮೌಲ್ಯದ ಸೊತ್ತು ಸಹಿತ ಇಬ್ಬರ ಬಂಧನ

0
image_editor_output_image552882240-1780725653267.jpg

ಕುಂದಾಪುರ: ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕರ್ಕುಂಜೆ ಗ್ರಾಮದ ನೇರಳಕಟ್ಟೆಯಲ್ಲಿ ನಡೆದಿದ್ದ ಕಳವು ಪ್ರಕರಣವನ್ನು ಅತ್ಯಂತ ಕ್ಷಿಪ್ರವಾಗಿ ಭೇದಿಸಿರುವ ವಿಶೇಷ ಪೊಲೀಸ್ ತಂಡವು ಇಬ್ಬರು ಆರೋಪಿಗಳನ್ನು ಬಂಧಿಸಿದೆ. ಬಂಧಿತರಿಂದ ಅಂದಾಜು ₹11 ಲಕ್ಷ ಮೌಲ್ಯದ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬ್ರಹ್ಮಾವರ ತಾಲೂಕಿನ ಕಾಡೂರು ಗ್ರಾಮದ ನಿವಾಸಿ ವಿಜಯ ಶೆಟ್ಟಿ (32) ಮತ್ತು ಕಾರ್ಕಳ ತಾಲೂಕಿನ ಇಂದಾರು ನಿವಾಸಿ ಅರ್ಜುನ ಪೂಜಾರಿ (29) ಬಂಧಿತ ಆರೋಪಿಗಳಾಗಿದ್ದಾರೆ. ಪ್ರಕರಣದ ಪ್ರಮುಖ (1ನೇ) ಆರೋಪಿ ಮೊಹಮ್ಮದ್ ಅಶ್ರಫ್ ಸದ್ಯ ತಲೆಮರೆಸಿಕೊಂಡಿದ್ದು, ಆತನ ಪತ್ತೆಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.

ಕಳೆದ ಮೇ 23 ರಂದು ಕರ್ಕುಂಜೆ ಗ್ರಾಮದ ನೇರಳಕಟ್ಟೆ ನಿವಾಸಿ ನಿರಂಜನ್ ಭಟ್ ಎಂಬುವವರು ತಮ್ಮ ಮನೆಗೆ ಬೀಗ ಹಾಕಿ ತೆರಳಿದ್ದರು. ಈ ನಡುವೆ ಬೆಳಿಗ್ಗೆ 11:47 ರಿಂದ ರಾತ್ರಿ 9:10 ರ ಮಧ್ಯದ ಅವಧಿಯಲ್ಲಿ ಮನೆಯ ಬಾಗಿಲಿನ ಬೀಗ ಮುರಿದು ಒಳ ನುಗ್ಗಿದ ಖದೀಮರು, ಲಾಕರ್‌ನಲ್ಲಿದ್ದ ಭಾರಿ ಪ್ರಮಾಣದ ಚಿನ್ನ, ಬೆಳ್ಳಿ ಹಾಗೂ ನಗದು ಹಣವನ್ನು ದೋಚಿ ಪರಾರಿಯಾಗಿದ್ದರು. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಕಾಯ್ದೆಯಡಿ ಕಳ್ಳತನ ಪ್ರಕರಣ ದಾಖಲಾಗಿತ್ತು.

Leave a Reply

Your email address will not be published. Required fields are marked *

error: Content is protected !!