ಮಡಿಕೇರಿ: ಕಾಡಾನೆ ತುಳಿತಕ್ಕೆ ನಿವೃತ್ತ ಐಜಿಪಿ ಪತ್ನಿ ಸಾವು
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಾಡಾನೆ ಮಾನವ ಸಂಘರ್ಷಕ್ಕೆ ಮೀತಿಯೇ ಇಲ್ಲದಂತಾಗಿದೆ. ಇಂದು ಬೆಳಗ್ಗೆ ಕೂಡ ಕಾಡಾನೆ ತುಳಿತಕ್ಕೆ ನಿವೃತ್ತ ಐಜಿಪಿ ಪತ್ನಿ ಸಾವನ್ನಪ್ಪಿದ್ದಾರೆ.
ಕೊಡಗು ಜಿಲ್ಲೆಯ ಪೋನ್ನಂಪೇಟೆ ತಾಲ್ಲೂಕಿನ ತಿತಿಮತಿ ಗ್ರಾಮ ಪಂಚಾಯತಿ ಸಮೀಪದ ಕೊಣ್ಣನಕಟ್ಟೆ ಗ್ರಾಮದಲ್ಲಿ ಘಟನೆ ನಡೆದಿದೆ. ಕಾಡಾನೆ ತುಳಿತಕ್ಕೆ ನಿವೃತ್ತ ಐಜಿಪಿ ಅಣ್ಣಳಮಾಡ ಸುನಿಲ್ ಅಚ್ಚಯ್ಯ ಅವರ ಪತ್ನಿ ಸಂಧ್ಯಾ (58) ಸಾವಿಗೀಡಾಗಿದ್ದಾರೆ.
ಸಂಧ್ಯಾ ಅವರು ಇಂದು ಬೆಳಗ್ಗೆ ವಾಯುವಿಹಾರಕ್ಕೆ ತೆರಳಿದ್ದರು. ಹಾಗೇ ತೋಟದ ಕಾರ್ಮಿಕರು ಕೆಲಸ ಮಾಡುತ್ತಿರುವುದನ್ನ ಮೇಲ್ವಿಚಾರಣೆ ಮಾಡಿಕೊಂಡು ವಾಪಸ್ ಮನೆಗೆ ಮರಳುತ್ತಿದ್ದರು. ಈ ಸಂದರ್ಭದಲ್ಲಿ ಏಕಾಏಕಿ ಎರಗಿದ ಕಾಡಾನೆ ಸಂಧ್ಯಾ ಅವರ ಮೇಲೆ ದಾಳಿ ನಡೆಸಿದೆ.





