June 6, 2026

ವಿಟ್ಲ: ಜಯಕರ್ನಾಟಕ ಜನಪರ ವೇದಿಕೆ ದ.ಕ ಜಿಲ್ಲೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ವಿತರಣೆ ಮತ್ತು ನೆಡುವ ಕಾರ್ಯಕ್ರಮ

0
image_editor_output_image441122936-1780757400673

ವಿಟ್ಲ: ಜಯಕರ್ನಾಟಕ ಜನಪರ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಸಂಸ್ಥಾಪಕ ಅಧ್ಯಕ್ಷರಾದ ಬಿ. ಗುಣರಂಜನ್ ಶೆಟ್ಟಿಯವರ ಮಾರ್ಗದರ್ಶನದಲ್ಲಿ ದಿನಾಂಕ 05-06-2026ರ, ಶುಕ್ರವಾರದಂದು ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ, ಪ್ರಕೃತಿಯನ್ನು ಉಳಿಸಿ, ಮುಂದಿನ ಪೀಳಿಗೆಗೆ ಮಾದರಿಯಾಗುವ ಉದ್ದೇಶದಿಂದ ಗಿಡ ವಿತರಣೆ ಮತ್ತು ನೆಡುವ ಕಾರ್ಯಕ್ರಮ ಜಿಲ್ಲೆಯ ವಿವಿಧ ಭಾಗಗಳಲ್ಲಿ ನಡೆಯಿತು.

ವಿಟ್ಲ ಸಮುದಾಯ ಅರೋಗ್ಯ ಕೇಂದ್ರದ ಮೆಡಿಕಲ್ ಆಫೀಸರ್ ಡಾ. ಶಮನ್  ಜೆ ಶೆಟ್ಟಿಯವರಿಗೆ ಗಿಡ ನೀಡಲಾಯಿತು. ವಿಟ್ಲ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಪ್ರಕಾಶ್ ದೇವಾಡಿಗರವರಿಗೆ ಗಿಡ ವಿತರಿಸಿ, ಬಳಿಕ ಠಾಣೆಯ ಪರಿಸರದಲ್ಲಿ ಗಿಡ ನೆಡಲಾಯಿತು.

ಜಯಕರ್ನಾಟಕ ಜನಪರ ವೇದಿಕೆಯ ರಾಜ್ಯ ಸಂಚಾಲಕ ರಾಮದಾಸ್ ಶೆಟ್ಟಿ, ಜಿಲ್ಲಾಧ್ಯಕ್ಷ ಕಾರ್ತಿಕ್ ರೈ, ಲಯನ್ಸ್ ಜಿಲ್ಲೆ 317 ರ ಜಿಲ್ಲಾ ಸಂಪರ್ಕ ಅಧಿಕಾರಿ ಲ. ಸುದರ್ಶನ್ ಪಡಿಯಾರ್, ಸುದೀಪ್ ಕುಮಾರ್ ಶೆಟ್ಟಿ, ಪ್ರಭಾಕರ್ ಅಮೈ, ತೌಸೀಫ್  ವಿಟ್ಲ, ರಾಜೀವ್, ಪ್ರವೀಣ್ ನಾಯ್ಕ್,  ಅಶ್ವಿನಿ ಪೆರುವಾಯಿ, ಉಬೇದ್ ವಿಟ್ಲ, ಅಬುಬಕ್ಕರ್ ಅನಿಲ ಕಟ್ಟೆ ಹಾಗೂ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!