June 7, 2026

ಮಲಯಾಳಂ ಖ್ಯಾತ ಚಲನಚಿತ್ರ ನಟ ಸಲೀಂ ಕುಮಾರ್ ನಿಧನ

0
Salim-Kumar-Biography.webp

ಕೊಚ್ಚಿ: ಖ್ಯಾತ ಮಲಯಾಳಂ ನಟ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಸಲೀಂ ಕುಮಾರ್ ಶನಿವಾರ ನಿಧನರಾದರು.

ಅವರು ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನ್ಯುಮೋನಿಯಾ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದ ಸಲೀಂ ಕುಮಾರ್ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಕಳೆದ ಕೆಲವು ವರ್ಷಗಳಿಂದ ಅವರು ಯಕೃತ್ತಿಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ.

ಹಾಸ್ಯ, ಭಾವನಾತ್ಮಕ ಹಾಗೂ ಗಂಭೀರ ಪಾತ್ರಗಳಲ್ಲಿ ಅಭಿನಯಿಸಿ ಮಲಯಾಳಂ ಚಿತ್ರರಂಗದಲ್ಲಿ ವಿಶಿಷ್ಟ ಸ್ಥಾನ ಗಳಿಸಿದ್ದ ಸಲೀಂ ಕುಮಾರ್ ಅವರು ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದರು.

ಮಲಯಾಳಂ ಚಿತ್ರರಂಗದ ಅದ್ಭುತ ಪ್ರತಿಭೆಯಾಗಿ ಗುರುತಿಸಿಕೊಳ್ಳುವ ಮುನ್ನ, ಸಲೀಂ ಕುಮಾರ್ ಅವರು ಕಲಾವಿದರಾಗಿ ತಮ್ಮ ಹಾಸ್ಯ ಪ್ರಜ್ಞೆಯಿಂದ ಜನಪ್ರಿಯತೆ ಗಳಿಸಿದ್ದರು.

ಕೇವಲ ಕಾಮಿಡಿ ಪಾತ್ರಗಳಿಗಷ್ಟೇ ಸೀಮಿತವಾಗದೆ, ನಂತರದ ದಿನಗಳಲ್ಲಿ ಅತ್ಯಂತ ಗಂಭೀರ ಹಾಗೂ ಖಡಕ್ ಪಾತ್ರಗಳಲ್ಲಿ ನಟಿಸುವ ಮೂಲಕ ವಿಮರ್ಶಕರಿಂದಲೂ ಭೇಷ್ ಎನಿಸಿಕೊಂಡರು.

ರಾಜಕೀಯದಲ್ಲೂ ಸಕ್ರಿಯ ಸಲೀಂ ಕುಮಾರ್ ಅವರು ಇತ್ತೀಚೆಗೆ ನಡೆದ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (UDF) ಮೈತ್ರಿಕೂಟವನ್ನು ಬಹಿರಂಗವಾಗಿ ಬೆಂಬಲಿಸಿದ್ದರು. ಯುಡಿಎಫ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ಸಭೆಗಳಲ್ಲಿ ಭಾಗವಹಿಸಿದ್ದ ಅವರು, ಆಡಳಿತರೂಢ ಎಲ್‌ಡಿಎಫ್ (LDF) ಸರ್ಕಾರದ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸಿದ್ದರು.

Leave a Reply

Your email address will not be published. Required fields are marked *

error: Content is protected !!