June 8, 2026

ಸ್ನೇಹಿತರೊಂದಿಗೆ ಪಾರ್ಟಿಗೆ  ಹೋಗಿದ್ದ ಮಹಿಳೆ ಅನುಮಾನಾಸ್ಪದ ಸಾವು:  ಹಳ್ಳದಲ್ಲಿ ಅನಿಷಾ ಫಾತೀಮಾ ಮೃತದೇಹ ಪತ್ತೆ

0
image_editor_output_image-92025957-1780911559733.jpg

ಬಳ್ಳಾರಿ: ಸ್ನೇಹಿತರು & ಸಹೋದ್ಯೋಗಿಗಳ ಜೊತೆ ಪಾರ್ಟಿಗೆ  ಹೋಗಿದ್ದ ಮಹಿಳೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಬಳ್ಳಾರಿಯ  ಹಂದ್ರಾಳ್‌ ಹಳ್ಳದಲ್ಲಿ ಮೃತದೇಹ ಪತ್ತೆಯಾಗಿದೆ.

ಮೃತ ಮಹಿಳೆಯನ್ನು ಬಳ್ಳಾರಿಯ ಕೌಲ್ ಬಜಾರ್ ನಿವಾಸಿ ಅನಿಷಾ ಫಾತೀಮಾ (38) ಎಂದು ಗುರುತಿಸಲಾಗಿದೆ. ಈಕೆ ಪ್ರಗತಿ ಬ್ಯಾಂಕ್‌ನಲ್ಲಿ ಉದ್ಯೋಗಿಯಾಗಿದ್ದರು.

ಶನಿವಾರ (ಜೂ.6) ರಾತ್ರಿ ಬ್ಯಾಂಕ್ ಸಿಬ್ಬಂದಿಯೊಂದಿಗೆ ಪಾರ್ಟಿಗೆ ಹೋಗಿದ್ದರು. ಬಳಿಕ ರಾತ್ರಿ 11 ಗಂಟೆಗೆ ತಮ್ಮ ಪತಿಗೆ ಕರೆ ಮಾಡಿದ್ದಾರೆ. ನಂತರ ಅನಿಷಾ ಫಾತೀಮಾ ಸಂಪರ್ಕಕ್ಕೆ ಸಿಕ್ಕಿಲ್ಲ. ಬೆಳಗ್ಗೆ ಹಳ್ಳದ ಪಕ್ಕದ ಜಾಲಿ ಬೇಲಿಯಲ್ಲಿ ಬೆತ್ತೆಲೆ ಸ್ಥಿತಿಯಲ್ಲಿ ಮಹಿಳೆಯ ಪತ್ತೆಯಾಗಿದ್ದು, ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದ ಕೂಡಲೇ ಎಪಿಎಂಸಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!