June 8, 2026

ಬೈಕ್‌ನಲ್ಲಿ ತೆರಳುತ್ತಿದ್ದಾಗ  ಮರ ಬಿದ್ದು ಯುವಕ ಸ್ಥಳದಲ್ಲೇ ಸಾವು

0
image_editor_output_image-1637614513-1780911673319.jpg

ರಾಮನಗರ: ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಯುವಕನ ಮೇಲೆ ಮರ ಬಿದ್ದ ಪರಿಣಾಮ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರ ತಾಲೂಕಿನ ಹುಣಸನಹಳ್ಳಿ ಗ್ರಾಮದ ಬಳಿ ನಡೆದಿದೆ.

ಪ್ರಶಾಂತ್ (19) ಮೃತ ದುರ್ದೈವಿ. ರಾಮನಗರ ತಾಲೂಕಿನ ನಾಗೋಹಳ್ಳಿ ಗ್ರಾಮದ ಯುವಕ ಪ್ರಶಾಂತ್ ಕೆಲಸಕ್ಕೆಂದು ಮುಂಜಾನೆ ಮನೆಯಿಂದ ರಾಮನಗರಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ.

ಈ ವೇಳೆ ರಾತ್ರಿ ಸುರಿದ ಮಳೆಗೆ ಬುಡ ಸಮೇತ ಬೃಹತ್ ಮರ ಬೈಕ್ ಮೇಲೆ ಏಕಾಏಕಿ ಬಿದ್ದಿದೆ. ಮರ ಬಿದ್ದ ರಭಸಕ್ಕೆ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮಗನನ್ನು ಕಳೆದುಕೊಂಡು ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

Leave a Reply

Your email address will not be published. Required fields are marked *

error: Content is protected !!