November 19, 2026

ಖಾಸಗಿ ಬಸ್ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ: ಹಲವರಿಗೆ ಗಾಯ

0
n3459209801640868966008e7f9c976aba18197db9f3ea9786d0f15c05c1b870699f0a371b0a8ab1182e35c.jpg

ಶಿವಮೊಗ್ಗ: ಖಾಸಗಿ ಬಸ್ ಮತ್ತು ಲಾರಿ ನಡುವೆ ಮುಖಾಮುಖಿ ‌ಡಿಕ್ಕಿಯಾಗಿ ಬಸ್ನಲ್ಲಿದ್ದ 10 ಜರ ಗಾಯಗೊಂಡಿರುವ ಘಟನೆ ತುಂಗಾ ನಗರ ಠಾಣಾ ವ್ಯಾಪ್ತಿಯ ಸಕ್ರೇಬೈಲು ಹತ್ತಿರ ಸಂಭವಿಸಿದೆ.

ಶಿವಮೊಗ್ಗ ಕಡೆಯಿಂದ ಹೋಗುತ್ತಿದ್ದ ಖಾಸಗಿ ಬಸ್ ಗೆ ತೀರ್ಥಹಳ್ಳಿ ಕಡೆಯಿಂದ ಬಂದ ಲಾರಿಯೊಂದು ಮುಖಾಮುಖಿ‌ ಡಿಕ್ಕಿ ಹೊಡೆದಿದೆ.

ಪರಿಣಾಮ ಬಸ್ ನಲ್ಲಿದ್ದ 20 ಜನರ ಪೈಕಿ 10 ಜನ ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನ ನಗರದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ತುಂಗಾ ನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!