June 9, 2026

ಮಂಗಳೂರು: ಉದ್ಯಮಿಯ ಹನಿಟ್ರ್ಯಾಪ್: ಕಾಂಗ್ರೆಸ್ ಪಕ್ಷದಿಂದ ನಿಝಾಮ್ ಉಚ್ಚಾಟನೆ

0
image_editor_output_image-504067396-1780994273765.jpg

ಮಂಗಳೂರು: ಉದ್ಯಮಿಯ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಝಾಮ್ ಮೇಲೆ ಸಮಾಜ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಆರೋಪ ಬಂದಿರುವುದು ಪಕ್ಷದ ಶಿಸ್ತು ಹಾಗೂ ಗೌರವಕ್ಕೆ ಧಕ್ಕೆ ಉಂಟುಮಾಡಿರುವುದು ಗಮನಕ್ಕೆ ಬಂದಿರುತ್ತದೆ. ಈ ಹಿನ್ನೆಲೆಯಲ್ಲಿ ಪಕ್ಷದ ಹಿತಾಸಕ್ತಿ ಮತ್ತು ಶಿಸ್ತು ಕಾಪಾಡುವ ದೃಷ್ಟಿಯಿಂದ ಅವರನ್ನು ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಹಾಗೂ ಯುವ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದಲೇ ಉಚ್ಚಾಟನೆ ಮಾಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ತಿಳಿಸಿದೆ.

ಪಕ್ಷದ ಸಿದ್ಧಾಂತ, ಮೌಲ್ಯಗಳು ಮತ್ತು ಸಂಘಟನೆಯ ಹಿತಾಸಕ್ತಿಗೆ ವಿರುದ್ಧವಾಗಿ ಯಾವುದೇ ಚಟುವಟಿಕೆಗಳನ್ನು ಸಹಿಸಲಾಗುವುದಿಲ್ಲ. ಪಕ್ಷದ ಶಿಸ್ತು ಉಲ್ಲಂಘಿಸುವವರ ವಿರುದ್ಧ ಮುಂದೆಯೂ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕಾಂಗ್ರೆಸ್ ಸಮಿತಿ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!