September 21, 2026

ಬಿಲ್ಲವ ಸಮಾಜದ ವಿರುದ್ಧ ಅವಹೇಳನಕಾರಿ ಹೇಳಿಕೆ: ಅನಿತಾ ಕಾಸರಗೋಡು ಎಂಬವರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲೂ ದೂರು ದಾಖಲು

0
image_editor_output_image512049584-1780997877697.jpg

ವಿಟ್ಲ: ಸಾಮಾಜಿಕ ಜಾಲತಾಣಗಳಲ್ಲಿ ಬಿಲ್ಲವ ಸಮಾಜದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎನ್ನಲಾದ ಅನಿತಾ ಕಾಸರಗೋಡು ಎಂಬವರ ವಿರುದ್ಧ ಕರಾವಳಿಯಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಕಾನೂನು ಕ್ರಮಕ್ಕೆ ಆಗ್ರಹಿಸಿ ಸರಣಿ ದೂರುಗಳು ದಾಖಲಾಗುತ್ತಿವೆ.

ನಿನ್ನೆಯಿಂದ ಬೆಳ್ತಂಗಡಿ, ಬಂಟ್ವಾಳ, ಮಂಗಳೂರು ಹಾಗೂ ಮೂಡಬಿದ್ರೆಯಲ್ಲಿ ವಿವಿಧ ಬಿಲ್ಲವ ಸಂಘಟನೆಗಳು ದೂರು ದಾಖಲಿಸಿದ್ದು, ಇಂದು (ಜೂನ್ 09) ವಿಟ್ಲದಲ್ಲೂ ಪ್ರತಿಭಟನೆಯ ಧ್ವನಿ ಮೊಳಗಿದೆ. ವಿಟ್ಲದ ಬಿಲ್ಲವ ಸಂಘ, ಮಹಿಳಾ ಘಟಕ ಮತ್ತು ಯುವವಾಹಿನಿ ಘಟಕಗಳ ಪ್ರಮುಖರು ಒಟ್ಟಾಗಿ ಸೇರಿ ವಿಟ್ಲ ಪೊಲೀಸ್ ಇನ್ಸ್‌ಪೆಕ್ಟರ್ ಹಾಗೂ ವಿಟ್ಲ ಉಪತಹಶೀಲ್ದಾರ್ ಅವರಿಗೆ ಅಧಿಕೃತವಾಗಿ ದೂರು ಸಲ್ಲಿಸಿದರು.

 

ಕೋಮು ಸೌಹಾರ್ದತೆಗೆ ಧಕ್ಕೆ ತರುವ ನಿಟ್ಟಿನಲ್ಲಿ ಮತ್ತು ಒಂದು ನಿರ್ದಿಷ್ಟ ಸಮುದಾಯದ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ಪೋಸ್ಟ್‌ಗಳನ್ನು ಹಂಚಿಕೊಂಡಿರುವ ಆರೋಪಿ ಅನಿತಾ ಕಾಸರಗೋಡು ಅವರನ್ನು ತಕ್ಷಣವೇ ಬಂಧಿಸಿ, ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಈ ಸಂದರ್ಭದಲ್ಲಿ ಸಂಘಟನೆಯ ಪದಾಧಿಕಾರಿಗಳು ಹಾಗೂ ಪ್ರಮುಖರು ಒತ್ತಾಯಿಸಿದರು.

ದೂರು ನೀಡುವ ಸಂದರ್ಭದಲ್ಲಿ ಬಿಲ್ಲವ ಸಂಘ ಹಾಗೂ ಯುವವಾಹಿನಿ ಘಟಕದ ಪ್ರಮುಖ ಮುಖಂಡರು, ಮಹಿಳಾ ಘಟಕದ ಪದಾಧಿಕಾರಿಗಳು ಮತ್ತು ಸಮುದಾಯದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

You may have missed

error: Content is protected !!