September 21, 2026

ಮಂಗಳೂರು: ಎನ್‌ಡಿಪಿಎಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಸೆರೆ

0
image_editor_output_image-2105479841-1781083116467.jpg

ಮಂಗಳೂರು: ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಈಗಾಗಲೇ ದಾಖಲಾಗಿದ್ದ ಮತ್ತೊಂದು ಎನ್‌ಡಿಪಿಎಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಸುಶಾನ್ ಪೂಜಾರಿ (27) ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಈ ಪ್ರಕರಣದಲ್ಲಿ ಮೊದಲೇ ಒಬ್ಬ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಮುಂದುವರಿದ ತನಿಖೆಯ ವೇಳೆ ಪ್ರಕರಣದಲ್ಲಿ ಭಾಗಿಯಾಗಿದ್ದ ಸುಶಾನ್ ಪೂಜಾರಿಯನ್ನು ಜೂನ್ 9ರಂದು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ.

 

ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪ್ರಕರಣದ ಕುರಿತು ಹೆಚ್ಚಿನ ವಿಚಾರಣೆ ಹಾಗೂ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!