June 10, 2026

ಉಳ್ಳಾಲ: 5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

0
image_editor_output_image362201510-1781083368919.jpg

ಉಳ್ಳಾಲ: ಸುಮಾರು 5 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ದಸ್ತಗಿರಿ ಮಾಡಿದ್ದು, ಆತನಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

ಕಾಸರಗೋಡು ಜಿಲ್ಲೆಯ ಉಪ್ಪಳದ ಮಂಜೀಲ್ ಪಚ್ಚಿಲಾಂಬರ್ ನಿವಾಸಿ ಫಜಲ್ (31) ದಸ್ತಗಿರಿ ಮಾಡಲಾದ ಆರೋಪಿ.

ಉಳ್ಳಾಲ ಪೊಲೀಸ್ ಠಾಣೆ ಪ್ರಕರಣ ಸಂಖ್ಯೆ- 76/21 ಕಲಂ 8(ಸಿ) 21(ಬಿ) NDPS Act ಪ್ರಕರಣದ ಆರೋಪಿಯಾಗಿರುವ ಫಜಲ್ 2021 ರಲ್ಲಿ ಜಾಮೀನನ ಮೇಲೆ ಹೊರಗಡೆ ಬಂದಿದ್ದ. ನಂತರ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರಿಸಿಕೊಂಡಿದ್ದ.

ಈ ಹಿನ್ನೆಲೆ ಪೊಲೀಸರು ಆರೋಪಿಯನ್ನು ಜೂನ್ 9 ರಂದು ಆತನ ಮನೆಯಾದ ಉಪ್ಪಳದಿಂದ ದಸ್ತಗಿರಿ ಮಾಡಿದ್ದಾರೆ. ಬಳಿಕ ಮಾನ್ಯ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

Leave a Reply

Your email address will not be published. Required fields are marked *

error: Content is protected !!