September 22, 2026

ಶಿವಮೊಗ್ಗ: ಕಾಂಗ್ರೆಸ್‌  ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

0
image_editor_output_image19462100-1781083988787.jpg

ಶಿವಮೊಗ್ಗ: ಕಾಂಗ್ರೆಸ್‌  ಕಾರ್ಯಕರ್ತನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಭದ್ರಾವತಿಯ ಅನ್ವರ್ ಕಾಲೋನಿಯಲ್ಲಿ ನಡೆದಿದೆ.

ನಗರದ ಹಳದಮ್ಮ ಬೀದಿ ನಿವಾಸಿ ವಿಶ್ವನಾಥ್ ಅಲಿಯಾಸ್ ಮುದ್ದೆ (35) ಹಲ್ಲೆಗೊಳಗಾದ ಯುವಕ. ಅಂಗಡಿಗೆ ಟೀ ಕುಡಿಯಲು ಹೋಗಿದ್ದ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ, ಸ್ಥಳದಿಂದ ಪರಾರಿಯಾಗಿದ್ದಾರೆ.

 

ಮಾರಕಾಸ್ತ್ರಗಳಿಂದ ಏಕಾಏಕಿ ದಾಳಿ ಮಾಡಿದ ಪರಿಣಾಮ ಎರಡು ಕೈಗಳು ತುಂಡಾಗುವ ಹಂತಕ್ಕೆ ತಲುಪಿವೆ. ಗಂಭೀರವಾಗಿ ಗಾಯಗೊಂಡಿದ್ದ ಆತನಿಗೆ ಭದ್ರಾವತಿಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!