September 22, 2026

ಒಂದೇ ಕುಟುಂಬದ ಮೂವರು ಅನುಮಾನಾಸ್ಪಾದವಾಗಿ ಸಾವು

0
image_editor_output_image1750150823-1781084153375.jpg

ಮಂಡ್ಯ: ಜಿಲ್ಲೆಯ ನೆಹರು ನಗರದಲ್ಲಿ ಒಂದೇ ಕುಟುಂಬದ ಮೂವರು ಅನುಮಾನಾಸ್ಪಾದವಾಗಿ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.

ಮೃತರನ್ನು ಪ್ರಭಾಕರ್, ಪತ್ನಿ ಜ್ಯೋತಿ ಹಾಗೂ ಪುತ್ರ ಸಂತೋಷ್ ಎಂದು ಗುರುತಿಸಲಾಗಿದೆ.

 

ಮಾಹಿತಿ ಪ್ರಕಾರ, ಜ್ಯೋತಿ ಮತ್ತು ಸಂತೋಷ್ ಅವರು ಕಳೆದ ರಾತ್ರಿ ಮನೆಯಲ್ಲೇ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇಬ್ಬರ ಸಾವಿಗೆ ನಿಖರ ಕಾರಣ ಏನು ಎಂಬುದು ಇನ್ನೂ ಗೊತ್ತಾಗಿಲ್ಲ.ಇದನ್ನೂ ಓದಿ: ಈಜಲು ಹಳ್ಳಕ್ಕೆ ಇಳಿದ ಸಹೋದರರಿಬ್ಬರು ನೀರುಪಾಲು – ಪೋಷಕರ ಆಕ್ರಂದನ

ಇತ್ತ ಇಂದು ಬೆಳಿಗ್ಗೆ ಪ್ರಭಾಕರ್ ಅವರು ತಮ್ಮದೇ ಬಟ್ಟೆ ಅಂಗಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮೃತ ಸಂತೋಷ್ ಅವರಿಗೆ ಕೇವಲ ಒಂದು ತಿಂಗಳ ಹಿಂದಷ್ಟೇ ಮದುವೆ ಆಗಿತ್ತು. ಘಟನಾ ಸ್ಥಳಕ್ಕೆ ಮಂಡ್ಯ ಪರ‍್ವ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!