ಕರ್ನಾಟಕ ಸೇರಿ ಆರು ರಾಜ್ಯಗಳಿಗೆ ಹೆಚ್ಚುವರಿ ವಿಪತ್ತು ಪರಿಹಾರ ನಿಧಿ ಬಿಡುಗಡೆಗೆ ಕೇಂದ್ರ ಸರ್ಕಾರ ಸಮ್ಮತಿ
ನವದೆಹಲಿ: 2021 ರಲ್ಲಿ ಪ್ರವಾಹ, ಭೂಕುಸಿತ ಮತ್ತು ಚಂಡಮಾರುತಗಳಿಂದ ಹಾನಿಗೊಳಗಾದ ಆರು ರಾಜ್ಯಗಳಿಗೆ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ನಿಧಿ (ಎನ್‌ಡಿಆರ್‌ಎಫ್) ಅಡಿಯಲ್ಲಿ ಹೆಚ್ಚುವರಿ ಕೇಂದ್ರ ಸಹಾಯವನ್ನು ವಿತರಿಸಲು ಕೇಂದ್ರ ಅನುಮೋದನೆ ನೀಡಿದೆ.
ಕೇಂದ್ರ ಸರ್ಕಾರ ಕರ್ನಾಟಕ ಸೇರಿ 6 ರಾಜ್ಯಗಳಿಗೆ ಎನ್‌ಡಿಆರ್‌ಎಫ್ ನಿಧಿ ಬಿಡುಗಡೆ ಮಾಡಲು ಸಮ್ಮತಿ ಸೂಚಿಸಿದ್ದು, ಒಟ್ಟು 3,063.21 ಕೋಟಿ ಬಿಡುಗಡೆ ಮಾಡಲಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದ್ದು, ಕರ್ನಾಟಕಕ್ಕೆ 504.06 ಕೋಟಿ ರೂಪಾಯಿ, ಪಶ್ಚಿಮ ಬಂಗಾಳಕ್ಕೆ 586 ಕೋಟಿ, ಅಸ್ಸಾಂಗೆ 51.53 ಕೋಟಿ ಹಾಗೂ ಗುಜರಾತ್‌ಗೆ 1,13.35 ಕೋಟಿ ರೂ. ಬಿಡುಗಡೆಗೆ ಒಪ್ಪಿಗೆ ನೀಡಿದೆ.
ಅದರಂತೆ, ಉತ್ತರಾಖಂಡ್‌ಗೆ 187.18 ಕೋಟಿ, ಮಧ್ಯಪ್ರದೇಶಕ್ಕೆ 600 ಕೋಟಿ ರೂ. ಬಿಡುಗಡೆ ಮಾಡಲು ಅಮಿತ್ ಶಾ ನೇತೃತ್ವದ ಸಭೆ ಸಮ್ಮತಿ ಸೂಚಿಸಿದೆ.





