June 11, 2026

ಗಡಿಯಾರ: ರಸ್ತೆ ಅಪಘಾತದಲ್ಲಿ ವ್ಯಕ್ತಿ ಸಾವು ಪ್ರಕರಣ: ರಸ್ತೆ ಬದಿಯಲ್ಲಿರುವ ಕಲ್ಲನ್ನು ತೆರವುಗೊಳಿಸದಿರುವುದು ಅಪಘಾತಕ್ಕೆ ಕಾರಣ: ಸಾವಜನಿಕರು ಆರೋಪ

0
image_editor_output_image-1134639053-1781176503619.jpg

ಪುತ್ತೂರು: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ
ಕಾರೊಂದು ರಸ್ತೆ ವಿಭಾಜಕಕ್ಕೆ ಡಿಕ್ಕಿಹೊಡೆದು ಬಳಿಕ ಪಲ್ಟಿಯಾದ ಪರಿಣಾಮ ಕಾರು ಚಾಲಕ ಮೃತಪಟ್ಟು ಅದರಲ್ಲಿದ್ದ ಸಹಪ್ರಯಾಣಿಕರು ಗಂಭೀರ ಗಾಯಗೊಂಡ ಘಟನೆ ಜೂ.10ರಂದು ಮಧ್ಯಾಹ್ನ ನಡೆದಿದ್ದು, ಅಪಘಾತಕ್ಕೆ ರಸ್ತೆಯಲ್ಲಿ ಇಟ್ಟಿರುವ ಕಲ್ಲು ಕಾರಣ ಎಂದು ಸಾವಜನಿಕರು ಆರೋಪಿಸಿದ್ದಾರೆ. ಕಾಮಗಾರಿ ಪೂರ್ಣಗೊಂಡರೂ ರಸ್ತೆ ಬದಿಯಲ್ಲಿರುವ ಕಲ್ಲನ್ನು ತೆರವುಗೊಳಿಸದ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಆರೋಪಿಸಿದ್ದಾರೆ.

ಹಾಸನ‌ ಮೂಲದ ಲಕ್ಷ್ಮೀಕಾಂತ್ ಮೃತ ದುರ್ದೈವಿ ಚಾಲಕ. ರಂಜಿತ್, ದರ್ಶನ್,ಶೋಭಾರವರು ಗಾಯಗೊಂಡಿದ್ದು, ಅವರು ಆಸ್ಪತ್ರೆಯಲ್ಲಿ‌ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಧ್ಯಾಹ್ನ ಸುಮಾರು 12 ಗಂಟೆಯ ವೇಳೆಗೆ ಈ ಘಟ‌ನೆ ನಡೆದಿದೆ, ಹಾಸನ‌ ಮೂಲದವರಾದ ನಾಲ್ವರು ಸಂಚರಿಸುತ್ತಿದ್ದ ಕಾರು ಗಡಿಯಾರ ಸಮೀಪ ರಸ್ತೆ ವಿಭಾಜಕಕ್ಕೆ ಡಿಕ್ಕಿಯಾಗಿ, ಬಳಿಕ‌ ಪಲ್ಟಿಯಾಗಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಘಟನೆ ಬಗ್ಗೆ ಮಾಹಿತಿ ಅರಿತ ಸ್ಥಳೀಯರು ಸ್ಥಳಕ್ಕಾಗಮಿಸಿ ಕಾರಿನೊಳಗಿದ್ದ ನಾಲ್ವರು ಗಾಯಾಳುಗಳನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿ‌ನ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಗಾಯಾಳುಗಳ ಪೈಕಿ ಕಾರು ಚಾಲಕ ಲಕ್ಷ್ಮೀ ಕಾಂತ್ ರವರ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂಧಿಸದೆ ಮೃತಪಟ್ಟಿರುವುದಾಗಿ ಮಾಹಿತಿ ಲಭಿಸಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭಿಸಬೇಕಿದೆ.

Leave a Reply

Your email address will not be published. Required fields are marked *

error: Content is protected !!