June 12, 2026

ಆಗುಂಬೆ ಘಾಟ್‌ನಲ್ಲಿ ಜೂನ್ 15ರಿಂದ ಭಾರಿ ವಾಹನಗಳ ಸಂಚಾರ ಸಂಪೂರ್ಣ ನಿಷೇಧ: ಆದೇಶ

0
image_editor_output_image1834910405-1781247131649.jpg

ಶಿವಮೊಗ್ಗ : ಮಳೆಗಾಲದ ಮುನ್ನೆಚ್ಚರಿಕಾ ಕ್ರಮವಾಗಿ ಹಾಗೂ ಸಾರ್ವಜನಿಕರ ಸುರಕ್ಷತೆಯ ಹಿತದೃಷ್ಟಿಯಿಂದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಪ್ರಸಿದ್ಧ ಆಗುಂಬೆ ಘಾಟ್‌ನಲ್ಲಿ (ರಾಷ್ಟ್ರೀಯ ಹೆದ್ದಾರಿ-169ಎ) ಇದೇ ಜೂನ್ 15 ರಿಂದ ಮಳೆಗಾಲ ಮುಗಿಯುವವರೆಗೂ ಭಾರಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.

ಶಿವಮೊಗ್ಗದಿಂದ ಹೊಸನಗರ-ಮಾಸ್ತಿಕಟ್ಟೆ ಮಾರ್ಗವಾಗಿ ಕುಂದಾಪುರ ಮತ್ತು ಉಡುಪಿಗೆ ಸಂಪರ್ಕ ಕಲ್ಪಿಸುವ ಹುಲಿಕಲ್ ಘಾಟಿಯಲ್ಲಿ ಇತ್ತೀಚೆಗೆ ಸಂಭವಿಸಿದ ಭೀಕರ ಭೂಕುಸಿತದ ನಂತರ ಅಲ್ಲಿನ ದುರಸ್ತಿ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ.

ಈ ಹಿನ್ನೆಲೆಯಲ್ಲಿ ಉಡುಪಿ ಮತ್ತು ಮಂಗಳೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 169ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ವಿಪರೀತವಾಗಿ ಹೆಚ್ಚಾಗಿದೆ. ಮಳೆಗಾಲದಲ್ಲಿಯೂ ಇದೇ ರೀತಿ ಭಾರಿ ವಾಹನಗಳ ಸಂಚಾರ ಮುಂದುವರಿದರೆ ಆಗುಂಬೆ ಘಾಟ್‌ನ ಕಡಿದಾದ ತಿರುವುಗಳಲ್ಲಿ ಭೂಕುಸಿತ ಉಂಟಾಗುವ, ಭೀಕರ ಅಪಘಾತಗಳು ಸಂಭವಿಸುವ ಮತ್ತು ಸಾರ್ವಜನಿಕರ ಓಡಾಟಕ್ಕೆ ತೀವ್ರ ತೊಂದರೆಯಾಗುವ ಆತಂಕ ಎದುರಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!