ವಿಟ್ಲ: ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮಾದಕ ವಸ್ತು ಅರಿವು ಕಾರ್ಯಕ್ರಮ
ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢಶಾಲೆ RMSA ವಿಟ್ಲ ಇಲ್ಲಿ ವಿಟ್ಲ ಪೊಲೀಸ್ ಠಾಣಾ ವತಿಯಿಂದ ಮಾದಕ ವಸ್ತು ಮತ್ತು ಪೋಕ್ಸೊ ಅರಿವು ಮಾಹಿತಿ ಕಾರ್ಯಕ್ರಮ ನಡೆಯಿತು.
ವಿಟ್ಲ ಪೊಲೀಸ್ ಠಾಣಾ ಸಬ್ ಇನ್ಸ್ಪೆಕ್ಟರ್ ರಾಮಕೃಷ್ಣ ಮಾಹಿತಿ ನೀಡಿದರು ಮತ್ತು ಸಬ್ ಇನ್ಸ್ಪೆಕ್ಟರ್ ರತ್ನಕುಮಾರ್ , ಮುಖ್ಯ ಶಿಕ್ಷಕಿ ಫೆಲ್ಸಿಟಾ ಈವಾ ಗಲ್ಬಾವೊ, ಸಹ ಶಿಕ್ಷಕರಾದ ಅನ್ನಪೂರ್ಣ, ಜಗದೀಶ್ ಶೆಟ್ಟಿ, ರಾಜೆಶ್, ಇತರ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.




