ಡಿವೈಡರ್‌ಗೆ ಢಿಕ್ಕಿ ಹೊಡೆದ ಕಾರು: ಕಾರಿನಲ್ಲಿದ್ದ ಯುವತಿ ಸಾವು
ಬೆಂಗಳೂರು: ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಯುವತಿ ಸಾವನ್ನಪ್ಪಿರುವ ಘಟನೆ ಬೆಂಗಳೂರು- ಚೆನ್ನೈ ಎಕ್ಸ್‌ಪ್ರೆಸ್ ವೇಯಲ್ಲಿ ನಡೆದಿದೆ.
ಹೊಸಕೋಟೆ ಸಮೀಪದ ದೊಡ್ಡ ಹುಲ್ಲೂರು ಬಳಿ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬೆಂಜ್ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಕಾರು ಚಾಲಕನ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿ ಚಾಲನೆಯೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.




