ಶ್ರೀರಾಮನ ಕುರಿತು ಅವಹೇಳನಕಾರಿ ಹೇಳಿಕೆ: ಸಾಹಿತಿ ಪ್ರೊ.ಕೆ.ಎಸ್.ಭಗವಾನ್ ವಿರುದ್ಧ ಪುತ್ತೂರು ಠಾಣೆಯಲ್ಲಿ ದೂರು ದಾಖಲು
ಪುತ್ತೂರು: ಶ್ರೀರಾಮನ ಕುರಿತು ಅವಹೇಳನಕಾರಿ ಹೇಳಿಕೆಗಳನ್ನು ನೀಡುವ ಮೂಲಕ ಹಿಂದೂ ಭಕ್ತರ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಸಾಹಿತಿ ಪ್ರೊ. ಕೆ.ಎಸ್. ಭಗವಾನ್ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಸಂವರ್ಧನಾ ಸಮಿತಿಯ ನೇತೃತ್ವದಲ್ಲಿ ಈ ಕಾನೂನು ಹೋರಾಟ ಆರಂಭವಾಗಿದೆ.
ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ದೂರು: ಶನಿವಾರ ಬೆಳಿಗ್ಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಮಿತಿಯ ಪದಾಧಿಕಾರಿಗಳು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮೆರವಣಿಗೆಯ ಮೂಲಕ ಠಾಣೆಗೆ ಆಗಮಿಸಿದ ನಿಯೋಗವು ಅಧಿಕೃತವಾಗಿ ದೂರು ಸಲ್ಲಿಸಿತು. “ಕಳೆದ ಹಲವು ವರ್ಷಗಳಿಂದ ಕೆ.ಎಸ್. ಭಗವಾನ್ ಅವರು ಉದ್ದೇಶಪೂರ್ವಕವಾಗಿ ಶ್ರೀರಾಮನ ವಿರುದ್ಧ ಕೀಳುಮಟ್ಟದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದು ಅಸಂಖ್ಯಾತ ಭಕ್ತರ ಧಾರ್ಮಿಕ ನಂಬಿಕೆಯನ್ನು ಹೀಯಾಳಿಸುವ ಪ್ರಯತ್ನವಾಗಿದೆ” ಎಂದು ದೂರುದಾರರು ತಿಳಿಸಿದ್ದಾರೆ.




