ವಿಟ್ಲ: ದುಬೈ ಉದ್ಯೋಗಿ ಅನಾರೋಗ್ಯದಿಂದ ನಿಧನ
ವಿಟ್ಲ: ಕಂಬಳಬೆಟ್ಟು ನೆಕ್ಕರೆ ನಿವಾಸಿ ಅಬ್ಬಾಸ್ ಅವರ ಪುತ್ರ ಜುಬೈರ್(27) ಅನಾರೋಗ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾದರು.
ಜುಬೈರ್ ಕಳೆದ ಮೂರು ವರ್ಷಗಳಿಂದ ದುಬೈಯಲ್ಲಿ ಉದ್ಯೋಗದಲ್ಲಿದ್ದು, ಅಲ್ಲಿ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಊರಿಗೆ ಬಂದಿದ್ದರು. ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.




