ಕುಂದಾಪುರ: ಮನೆಗಳ್ಳತನ, ದ್ವಿಚಕ್ರ ವಾಹನ ಕಳ್ಳತನ ಪ್ರಕರಣ: ಆರೋಪಿಯ ಬಂಧನ
ಕುಂದಾಪುರ: ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಗಳ್ಳತನ ಮತ್ತು ದ್ವಿಚಕ್ರ ವಾಹನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಮೂಲದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಗುಜರಾತ್‌ನ ಅಮ್ರೇಲಿ ಜಿಲ್ಲೆಯ ಸಾವರ್ ಕುಂಡ್ಲ ತಾಲೂಕಿನ ಲಾಲಾಜಿಬಾಯ್ ಬುದಾಬಾಯ್ ಸೋಲಂಕಿ (37) ಎಂದು ಗುರುತಿಸಲಾಗಿದೆ.
ಮಾರ್ಚ್ 18 ರ ರಾತ್ರಿ ಕುಂದಾಪುರದ ಸಂಗಮ ಜಂಕ್ಷನ್ ಸಮೀಪದ ಮನೆಯೊಂದರ ಬೀಗ ಮುರಿದು ಕಳ್ಳರು 10,000 ರೂಪಾಯಿ ನಗದು ದೋಚಿದ್ದರು. ಈ ಸಂಬಂಧ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದೇ ದಿನ ಕುಂದಾಪುರದ ವಿನಯ್ ಆಸ್ಪತ್ರೆ ಬಳಿ ನಿಲ್ಲಿಸಿದ್ದ ದ್ವಿಚಕ್ರ ವಾಹನವೊಂದು ಕಳ್ಳತನವಾಗಿರುವ ಬಗ್ಗೆಯೂ ಮತ್ತೊಂದು ಪ್ರಕರಣ ದಾಖಲಾಗಿತ್ತು.




