September 21, 2026

ಪುತ್ತೂರು: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಕೋಮಾದಲ್ಲಿದ್ದ ಯುವಕ ಮೃತ್ಯು

0
image_editor_output_image-236921591-1781511819525.jpg

ಪುತ್ತೂರು: ಕಳೆದ ಕೆಲವು ತಿಂಗಳುಗಳ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಕೋಮಾದಲ್ಲಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ನೆಕ್ಕಿಲಾಡಿಯ ಬಾಡಿಗೆ ಮನೆಯಲ್ಲಿ ಜೂನ್ 14ರಂದು ನಿಧನರಾಗಿದ್ದಾರೆ.

ಮೃತರು ಮೂಲತಃ ಮಠ ಗ್ರಾಮದ ನಿವಾಸಿಯಾಗಿದ್ದು, ಸದ್ಯ ನೆಕ್ಕಿಲಾಡಿಯ ಬಾಡಿಗೆ ಮನೆಯಲ್ಲಿ ವಾಸವಿದ್ದ ಬದ್ರುದ್ದೀನ್ ಮಠ ಎಂದು ಗುರುತಿಸಲಾಗಿದೆ. ಇವರು ಕೂಟೇಲ್‌ನ ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು.

 

2025ರ ಡಿಸೆಂಬರ್ 11ರ ರಾತ್ರಿ ಬದ್ರುದ್ದೀನ್ ಅವರು ಉಪ್ಪಿನಂಗಡಿಯಿಂದ ನೆಕ್ಕಿಲಾಡಿಗೆ ತಮ್ಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ, ಎದುರಿನಿಂದ ಬಂದ ಕಾರು ಅವರ ಬೈಕ್‌ಗೆ ಡಿಕ್ಕಿ ಹೊಡೆದಿತ್ತು. ಈ ಭೀಕರ ಅಪಘಾತದಲ್ಲಿ ಬದ್ರುದ್ದೀನ್ ಅವರು ಗಂಭೀರವಾಗಿ ಗಾಯಗೊಂಡಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!