ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ಆತ್ಮಹತ್ಯೆ
ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಭಾನುವಾರ ಸಂಜೆ ಸುಮಾರು 5:30ರ ವೇಳೆಗೆ ಸಂಚಿತಾ ಅವರ ಸಹೋದರಿ ಅಂಜಲಿ ಮನೆಯಿಂದ ಹೊರಗೆ ಹೋಗಿದ್ದರು. ಈ ಸಮಯದಲ್ಲಿ ಮನೆಯಲ್ಲಿ ಬೇರೆ ಯಾರೂ ಇರಲಿಲ್ಲ.
ನಟಿ ಸಂಚಿತಾ ಅವರು ತಮ್ಮ ಕೋಣೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ಸೀರೆಯಿಂದ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೂಡಲೇ ಅವರನ್ನು ತುಲಿಂಜ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.




