June 15, 2026

ವಿಟ್ಲ: ಕೋಳಿ ಅಂಕದ ಜೂಜಾಟ ಅಡ್ಡೆಗೆ ಪೊಲೀಸ್ ದಾಳಿ: ಮೂವರು ವಶಕ್ಕೆ

0
cockfighting-on-dark-background-photo.jpg

ವಿಟ್ಲ: ಬಂಟ್ವಾಳ ತಾಲೂಕಿನ ಸಾಲೆತ್ತೂರು ಗ್ರಾಮದ ಸಾರ್ವಜನಿಕ ಗುಡ್ಡ ಪ್ರದೇಶದಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕದ ಜೂಜಾಟ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ರಾಮಕೃಷ್ಣ ಹಾಗೂ ಸಿಬ್ಬಂದಿ ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆದಿದ್ದಾರೆ.

ಶನಿವಾರ ಸಂಜೆ ನಡೆದ ಕಾರ್ಯಾಚರಣೆಯಲ್ಲಿ ಸ್ಥಳಕ್ಕೆ ತೆರಳಿದ ಪೊಲೀಸರು ಪರಿಶೀಲನೆ ನಡೆಸಿದ ವೇಳೆ ಕೋಳಿ ಅಂಕದ ಜೂಜಾಟ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ ವೇಳೆ ಉಳ್ಳಾಲ ಬೋಳಿಯಾರ್ ನಿವಾಸಿ ಲತೇಶ್ ಕುಮಾರ್ (37), ಬಂಟ್ವಾಳ ಮಂಚಿ ನಿವಾಸಿ ಸುರೇಶ್ ನಾಯ್ಕ್ ಕೆ (63) ಹಾಗೂ ಬಂಟ್ವಾಳ ವಿಟ್ಲಪಡ್ನೂರು ನಿವಾಸಿ ದಯಾನಂದ (40) ಅವರನ್ನು ವಶಕ್ಕೆ ಪಡೆಯಲಾಗಿದೆ.

ಆರೋಪಿಗಳಿಂದ ಜೂಜಾಟಕ್ಕೆ ಬಳಸಲಾಗಿದ್ದ ₹1,550 ನಗದು, ಮೂರು ಅಂಕದ ಕೋಳಿಗಳು ಹಾಗೂ ಇತರೆ ಸಂಬಂಧಿತ ಸೊತ್ತುಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.

ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 129/2026 ದಾಖಲಿಸಲಾಗಿದ್ದು, ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 87 ಮತ್ತು 93, ಪ್ರಿವೆನ್ಷನ್ ಆಫ್ ಕ್ರುಯೆಲ್ಟಿ ಟು ಅನಿಮಲ್ಸ್ ಕಾಯ್ದೆ 1960ರ ಕಲಂ 3 ಮತ್ತು 11 ಹಾಗೂ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 112ರ ಅಡಿಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!