June 15, 2026

ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪಿಕಪ್ ವಾಹನ: ನಾಲ್ವರು ಮಕ್ಕಳು ಸೇರಿ 8 ಮಂದಿ ಸಾವು

0
image_editor_output_image-232800699-1781516302544.jpg

ಮುಂಬೈ: ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಮತ್ತು ನಾಲ್ವರು ಮಕ್ಕಳು ಸೇರಿ ಎಂಟು ಮಂದಿ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ  ಸೋಲಾಪುರ  ಜಿಲ್ಲೆಯ ಮಲ್ಶಿರಾಸ್ ತಹಸಿಲ್‌ನಲ್ಲಿ ನಡೆದಿದೆ. ಈ ಅಪಘಾತದಲ್ಲಿ ಏಳು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಂಢರಪುರ ಮೂಲದ 15 ಜನರು ಮಾಸ್ವಾಡ್‌ನ ದೇವಸ್ಥಾನಕ್ಕೆ ಭೇಟಿ ನೀಡಿ ಹಿಂತಿರುಗುತ್ತಿದ್ದರು. ಈ ವೇಳೆ ತಂಡುಲ್ವಾಡಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಪಿಕಪ್‌ನಲ್ಲಿ ಇದ್ದವರು ಹೆಚ್ಚಿನವರು ಸಂಬಂಧಿಕರು ಮತ್ತು ನೆರೆಹೊರೆಯವರು ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!