June 17, 2026

ಉಪ್ಪಿನಂಗಡಿ: ದರೋಡೆ ಪ್ರಕರಣದಲ್ಲಿ ಇಬ್ಬರ ಆರೋಪ  ಸಾಬೀತು: 3 ವರ್ಷ ಜೈಲು ಶಿಕ್ಷೆ,  ತಲಾ 10,000 ರೂ. ದಂಡ

0
image_editor_output_image-899005057-1781692835077.jpg

ಉಪ್ಪಿನಂಗಡಿ: ಇಳಂತಿಲ ಎಂಬಲ್ಲಿ ಕಳೆದ 2023ರಲ್ಲಿ ನಡೆದಿದ್ದ ದರೋಡೆ ಪ್ರಕರಣದ ಇಬ್ಬರು ಆರೋಪಿಗಳು ತಪ್ಪಿತಸ್ಥರೆಂದು ಸಾಬೀತಾಗಿದ್ದು, ಮಾನ್ಯ ನ್ಯಾಯಾಲಯವು ಅವರಿಗೆ 3 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ ತಲಾ 10,000 ರೂಪಾಯಿ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ.

ಬೆಳ್ತಂಗಡಿ ತಾಲೂಕಿನ ಇಳಂತಿಲ ನಿವಾಸಿ ರಾಜೀಮ್ ಹಾಗೂ ಕೊಕ್ಕಡ ನಿವಾಸಿ ಮುಸ್ತಫಾ ಶಿಕ್ಷೆಗೊಳಗಾದ ಆರೋಪಿಗಳಾಗಿದ್ದಾರೆ.

ದಿನಾಂಕ 20.03.2023 ರಂದು ಇಳಂತಿಲದಲ್ಲಿ ಈ ದರೋಡೆ ನಡೆದಿತ್ತು. ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ 392, 216(A) ಮತ್ತು ಮೋಟಾರು ವಾಹನ ಕಾಯ್ದೆಯ (IMV Act) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಉಪ್ಪಿನಂಗಡಿ ವೃತ್ತ ನಿರೀಕ್ಷಕರಾಗಿದ್ದ (ಸಿಐ) ರವಿ ಬಿ.ಎಸ್. ಅವರು ಪ್ರಕರಣದ ಸೂಕ್ತ ತನಿಖೆ ನಡೆಸಿ, ಅಗತ್ಯ ಸಾಕ್ಷ್ಯಾಧಾರಗಳನ್ನು ಕಲೆಹಾಕಿ ಆರೋಪಿಗಳ ವಿರುದ್ಧ ಮಾನ್ಯ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ (ಚಾರ್ಜ್ ಶೀಟ್) ಸಲ್ಲಿಸಿದ್ದರು.

Leave a Reply

Your email address will not be published. Required fields are marked *

error: Content is protected !!