June 17, 2026

ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಣು ಬಿಗಿದು ಆತ್ಮಹತ್ಯೆ

0
image_editor_output_image-468636098-1781694022644.jpg

ಕಲಬುರಗಿ: ಪೊಲೀಸ್ ಸಬ್ ಇನ್ಸಪೆಕ್ಟರ್ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ  ನಗರದ ಗಂಗಾ ನಗರದ ನಿವಾಸದಲ್ಲಿ ನಡೆದಿದೆ.

ಕಲಬುರಗಿಯ ಡಿ.ಸಿ.ಆರ್.ಬಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಸವರಾಜ್ ಹೆರೂರ್ ಸಾವನ್ನಪ್ಪಿದ ದುರ್ದೈವಿ.

2014ರ ಬ್ಯಾಚ್‌ನ ಪಿಎಸ್‌ಐ ಆಗಿದ್ದ ಮೃತ ಬಸವರಾಜ್ ಕಳೆದ ಎರಡು ವರ್ಷಗಳಿಂದ ಕಲಬುರಗಿಯ ಡಿ.ಸಿ.ಆರ್.ಬಿ ಶಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮಂಗಳವಾರ (ಜೂ.16) ತಡರಾತ್ರಿ ಅವರು ತಮ್ಮ ಸ್ನೇಹಿತರಿಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದ್ದರು ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!