ಮಂಗಳೂರು: ಕೊರೊನಾ ಮುನ್ನೆಚ್ಚರಿಕೆ ಕ್ರಮವಾಗಿ ಬೀಚ್ ಗಳ ಪ್ರವೇಶ ನಿಷೇಧ: ದ.ಕ ಜಿಲ್ಲಾಧಿಕಾರಿ
ಸುರತ್ಕಲ್: “ಕೊರೊನಾ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಪಣಂಬೂರು, ತಣ್ಣೀರುಬಾವಿ, ಸುರತ್ಕಲ್ ಸೇರಿದಂತೆ ಮಂಗಳೂರಿನ ಪ್ರಮುಖ ಬೀಚ್‌ಗಳಿಗೆ ಡಿ.31ರ ಶುಕ್ರವಾರದಂದು ಸಂಜೆ 7 ಗಂಟೆಯ ಬಳಿಕ ಹೋಗುವುದು ಹಾಗೂ ಅಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಮಾಡುವುದನ್ನು ನಿಷೇಧಿಸಲಾಗಿದೆ” ಎಂದು ದ.ಕ. ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ. ವಿ ಹೇಳಿದ್ದಾರೆ.
“ಬೀಚ್ ಸೇರಿದಂತೆ ಯಾವುದೇ ಸಾರ್ವಜನಿಕ ಸ್ಥಳದಲ್ಲಿ ಹೊಸ ವರ್ಷಾಚರಣೆ ನಡೆಸಬಾರದು” ಜಿಲ್ಲಾಧಿಕಾರಿ ತಿಳಿಸಿದ್ದಾರೆ.