ಪೊಲೀಸ್ ಜೀಪು ಪಲ್ಟಿ: ಪಿ ಎಸ್ ಐ ಗಾಯ

ಸಿದ್ದಾಪುರ: ಚಾಲಕನ ನಿಯಂತ್ರಣ ತಪ್ಪಿದ ಪೊಲೀಸ್ ಜೀಪ್ ಪಲ್ಟಿಯಾಗಿದ್ದು, ಚಾಲಕನಿಗೆ ತೀವ್ರ ಗಾಯವಾಗಿದೆ. ಪಿಎಸ್ಐ ಪ್ರಾಣಾಪಾಯದಿಂದ ಪಾರಾಗಿದ ಘಟನೆ ತಾಲೂಕಿನ ನಿಡಗೋಡ ಬಳಿ ನಡೆದಿದೆ.
ಶಿರಸಿಯಲ್ಲಿ ನಡೆಯುತ್ತಿದ್ದ ಪೊಲೀಸ್ ದೈಹಿಕ ಪರೀಕ್ಷೆಗೆ ಜೀಪ್ನಲ್ಲಿ ಪಿಎಸ್ಐ ಮಹಾಂತೇಶಗೆವ ಮತ್ತು ಚಾಲಕ ಯಲ್ಲಪ್ಪ ಕಾಗವಾಡ ಬರುತ್ತಿದ್ದರು.
ಮಾರ್ಗಮಧ್ಯೆ ನಿಡಗೋಡ ಬಳಿ ಎದುರಿನಿಂದ ಅತಿವೇಗವಾಗಿ ಬಂದ ಬೈಕ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಜೀಪ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ತೀವ್ರವಾಗಿ ಗಾಯಗೊಂಡ ಯಲ್ಲಪ್ಪ ಕಾಗವಾಡ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದೆ. ಪಿಎಸ್ಐ ಮಹಾಂತೇಶಗೆವ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸಿದ್ದಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗಿದೆ.