ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ನೊಂದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ
ಚೆನ್ನೈ: ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯಲ್ಲಿ 19 ವರ್ಷದ ನೀಟ್ ಆಕಾಂಕ್ಷಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಅನುಕೀರ್ತನಾ (19) ಆತ್ಮಹತ್ಯೆಗೆ ಶರಣಾದ ಯುವತಿ. ಈಕೆ ಈಗಾಗಲೇ ಎರಡು ಬಾರಿ ನೀಟ್ ಪರೀಕ್ಷೆ ಬರೆದಿದ್ದಳು. ಮತ್ತೊಮ್ಮೆ ಪರೀಕ್ಷೆ ಬರೆಯಲು ಸಿದ್ಧತೆ ನಡೆಸುತ್ತಿದ್ದಳು. ಇತ್ತೀಚಿನ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯ ನಂತರ ಮಾನಸಿಕವಾಗಿ ತೀವ್ರ ಕುಗ್ಗಿದ್ದಳು. ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.




