ವಿಟ್ಲ: ವಿಟ್ಠಲ್ ಪದವಿಪೂರ್ವ ಕಾಲೇಜ್ ನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ-ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ
ವಿಟ್ಲ ವಿಟ್ಠಲ ಎಜುಕೇಶನ್ ಸೊಸೈಟಿ ವಿಟ್ಲ ಇದರ ಪದವಿ ಪೂರ್ವ ಕಾಲೇಜಿನ 2026-27 ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ, ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಮತ್ತು ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಕಾಲೇಜಿನ ಸುವರ್ಣ ರಂಗ ಮಂದಿರದಲ್ಲಿ ನಡೆಯಿತು.


ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿದ ಮಂಗಳೂರು ಕೊಡಿಯಾಲಬೈಲು ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ಶಿಕ್ಷಕಿ ನಯನಾ ಬಿ ಆರ್ ಕಾರ್ಯಕ್ರಮ ಉದ್ಘಾಟಿಸಿದರು.

ವಿಟ್ಠಲ ಎಜುಕೇಶನ್ ಸೊಸೈಟಿ ಆಡಳಿತ ಮಂಡಳಿಯ ಅಧ್ಯಕ್ಷ ಮುಗುಳಿ ತಿರುಮಲೇಶ್ವರ ಭಟ್ ಅಧ್ಯಕ್ಷತೆ ವಹಿಸಿದ್ದರು. ಸದಸ್ಯರಾದ ನಿತ್ಯಾನಂದ ನಾಯಕ್ ಮತ್ತು ರವಿಪ್ರಕಾಶ್ ವೇದಿಕೆಯಲ್ಲಿ ಅತಿಥಿಗಳಾಗಿ ಭಾಗವಹಿಸಿದ್ದರು. ಪ್ರಿನ್ಸಿಪಾಲ್ ಆದರ್ಶ ಚೊಕ್ಕಾಡಿ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶೇಕ್ ಮಹಮ್ಮದ್ ಶಾಮಿದ್, ಉಪಾಧ್ಯಕ್ಷ ಪುನೀತ್ ಕುಮಾರ್, ಕಾರ್ಯದರ್ಶಿ ಮನಸ್ವಿ ಮತ್ತು ಜತೆ ಕಾರ್ಯದರ್ಶಿ ಕತೀಜತ್ ಮಾಸಿಯಾ ಇವರಿಗೆ ಪ್ರಮಾಣ ವಚನ ಬೋಧಿಸಿದರು. 2025-26 ನೇ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.
ಮನಸ್ವಿ ಸ್ವಾಗತಿಸಿದರು. ಪ್ರಮೀಳ ಕೆ ಆರ್ ಪ್ರಸ್ತಾವಿಸಿದರು. ಉದಯ ನಾಯಕ್ ವಂದಿಸಿದರು. ಯಕ್ಷಿತಾ ನಿರೂಪಿಸಿದರು. ಸವಿತಾ ಮತ್ತು ಸಂಪಾವತಿ ಸಹಕರಿಸಿದರು.




