ಕಲ್ಲಡ್ಕದ ಅನುಗ್ರಹ ಮಹಿಳಾ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ
ಅನುಗ್ರಹ ಮಹಿಳಾ ಕಾಲೇಜು ಕಲ್ಲಡ್ಕದಲ್ಲಿ ವಿದ್ಯಾರ್ಥಿನಿಯರು ಹಾಗೂ ಉಪನ್ಯಾಸಕರು ಸೇರಿ ಕಾಲೇಜು ಆವರಣದಲ್ಲಿ ಗಿಡಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.
ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಫಾತಿಮತ್ ಅಜ್ಮಿಯ, ಪರಿಸರ ಸಂರಕ್ಷಣೆ, ಪ್ರಕೃತಿಯ ಮಹತ್ವ,
ವಿಶ್ವ ಪರಿಸರ ದಿನದ ಪ್ರಾಮುಖ್ಯತೆಯನ್ನು ತನ್ನ ಭಾಷಣದ ಮೂಲಕ ಮನಮುಟ್ಟುವಂತೆ ವಿವರಿಸಿದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಜೀವಶಾಸ್ತ್ರ ವಿಭಾಗದ ಉಪನ್ಯಾಸಕಿ ಶೀತಲ್ ಪಿ. ಜೆ. El Nino (ಎಲ್ ನಿನೊ) – ಪೆಸಿಫಿಕ್ ಮಹಾಸಾಗರದ ನೀರಿನ ಮೇಲ್ಮೈ ಸಾಮಾನ್ಯಕ್ಕಿಂತ ಹೆಚ್ಚು ಬೆಚ್ಚಗಾಗುವ ಹವಾಮಾನ ವಿದ್ಯಮಾನ. ಇದರಿಂದ ಮಳೆ, ತಾಪಮಾನ ಮತ್ತು ಹವಾಮಾನ ಮಾದರಿಗಳಲ್ಲಿ ಬದಲಾವಣೆ ಅಥವಾ ಮಳೆಯ ಅಭಾವ ಉಂಟಾಗಬಹುದು. ವಾತಾವರಣದಲ್ಲಿ ಹಸಿರುಮನೆ ಅನಿಲಗಳು (Greenhouse gases) ಹೆಚ್ಚಾಗುವುದರಿಂದ ಭೂಮಿಯ ಸರಾಸರಿ ಉಷ್ಣಾಂಶ ಹೆಚ್ಚಾಗುವ ಪ್ರಕ್ರಿಯೆಯಾದ ಜಾಗತಿಕ ತಾಪಮಾನ ಏರಿಕೆ (Global warming) ಯಿಂದ
ನಮ್ಮ ಪರಿಸರವನ್ನು ನಾವು ಸಂರಕ್ಷಿಸಬೇಕು. ನಾವು ಬಳಸಿದ ಪ್ಲಾಸ್ಟಿಕ್ ಸಮುದ್ರವನ್ನು ಸೇರಿ ಅಲ್ಲಿಯ ಜಲಚರಗಳ ಮೂಲಕ ನಮ್ಮ ಆಹಾರ ಸರಪಳಿಯನ್ನು ಸೇರುತ್ತವೆ ಎನ್ನುವ ಉದಾಹರಣೆಯ ಮೂಲಕ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಿ, ಜಲ,ಗಾಳಿ, ವಿದ್ಯುತನ್ನು ಸಂರಕ್ಷಿಸುವ ಮೂಲಕ ಪರಿಸರ ಸ್ನೇಹಿ ಜೀವನವನ್ನು ಅಳವಡಿಸಿಕೊಳ್ಳುವ ಅಗತ್ಯವನ್ನು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಪ್ರಾಂಶುಪಾಲರಾದ ಡಾ. ಹೇಮಲತಾ ಬಿ. ಡಿ., ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಪರಿಸರ ಸಂರಕ್ಷಣೆಯ ಮಹತ್ವದ ಕುರಿತು ವಿದ್ಯಾರ್ಥಿನಿಯರಿಗೆ ಸಂದೇಶ ನೀಡಿ, ಪರಿಸರ ಸಂರಕ್ಷಣೆಯ ಪ್ರತಿಜ್ಞೆಯನ್ನು ಬೋಧಿಸಿದರು.
ವಿಶ್ವ ಪರಿಸರ ದಿನದ ಅಂಗವಾಗಿ ಪರಿಸರ ಜಾಗೃತಿಯ ಕುರಿತು ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಿ, ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು.
ವೇದಿಕೆಯಲ್ಲಿ ಅನುಗ್ರಹ ಸಲಹಾ ಸಮಿತಿಯ ಕಾರ್ಯದರ್ಶಿಯಾದ ಶ್ರೀಮತಿ ತಾರಾಕ್ಷಿ, ಪದವಿ ವಿಭಾಗದ ಸಂಯೋಜಕಿ ಶ್ರೀಮತಿ ಆಬಿದ ಬಿ., ಪದವಿ ಪೂರ್ವ ವಿಭಾಗದ ಸಂಯೋಜಕಿ ಶ್ರೀಮತಿ ಮಮಿತಾ ಎಸ್. ರೈ, ಹಾಗೂ ಮೌಲ್ಯ ಶಿಕ್ಷಣ ವಿಭಾಗದ ಮುಖ್ಯಸ್ಥೆ ಶ್ರೀಮತಿ ಸಲೀಮಾ ಎಂ., ಸಲಹಾ ಸಮಿತಿಯ ಸದಸ್ಯೆ ಶ್ರೀಮತಿ ನವ್ಯ, ಕಾರ್ಯಕ್ರಮದ ಮೇಲ್ವಿಚಾರಕಿ ವಾಣಿಜ್ಯ ವಿಭಾಗದ ಉಪನ್ಯಾಸಕಿಯಾದ ಶ್ರೀಮತಿ ಧನುಶ್ರೀ ಉಪಸ್ಥಿತರಿದ್ದರು.
ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಮರಿಯಮ್ ರೈಫಾ ಕಿರಾತ್ ಪಠಿಸಿ, ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ನೆಬೀಸತ್ ಹಿಬಾ ಸ್ವಾಗತಿಸಿ, ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಫಾತಿಮತ್ ಫಜ್ನ ವಂದಿಸಿ, ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ನೂಹ ಮರಿಯಮ್ ಹೈದರ್ ಕಾರ್ಯಕ್ರಮವನ್ನು ನಿರೂಪಿಸಿದರು.




