ದಕ್ಷಿಣ ಕನ್ನಡ ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ
Oplus_16908288
ಮಂಗಳೂರು: ಕೇಂದ್ರ ಮುಶಾವರ ಸದಸ್ಯರೂ, ದಕ್ಷಿಣ ಕನ್ನಡ ಜಿಲ್ಲಾ ಖಾಝಿಯವರಾದ ಶೈಖುನಾ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ರವರು ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳೂರಿನ ಯೇನಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದರು.
ಆಸ್ಪತ್ರೆಯಿಂದ ಮಂಗಳೂರಿನ ಬೆಲ್ಯೆ ಪಲ್ಲಿ (ಝೀನತ್ ಭಕ್ಷ್) ಮಸೀದಿಗೆ ಪಾರ್ಥಿವ ಶರೀರ ರವಾನೆಯಾಗಲಿದೆ. ಬಳಿಕ ಮಸೀದಿಯಲ್ಲಿ ಜನಾಝ ಸ್ನಾನ ಮತ್ತು ಜನಾಝ ನಮಾಝ್ ನಡೆಯಲಿದೆ. ಬಳಿಕ ಕಾಸರಗೋಡಿನ ಅವರ ಮನೆಗೆ ಪಾರ್ಥಿವ ಶರೀರ ರವಾನೆಯಾಗಲಿದೆ.
ಕಾಸರಗೋಡು ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಬಳಿಕ ಮೂಡುಬಿದಿರೆಯ ಕಾಶಿಪಟ್ಣದ ದಾರುನ್ನೂರಿನಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ ಎಂದು ತಿಳಿದು ಬಂದಿದೆ.




