ಉಪ್ಪಿನಂಗಡಿ: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ವಾಹನಗಳಿಂದ ಬ್ಯಾಟರಿ ಕಳವು ಪ್ರಕರಣ: ಕೇರಳ ಮೂಲದ ಆರೋಪಿಯ ಬಂಧನ
ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಹಲವೆಡೆ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ವಾಹನಗಳಿಂದ ಬ್ಯಾಟರಿ ಕಳವು ಮಾಡುತ್ತಿದ್ದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಕೇರಳದ ಚೆರ್ಕಳ ಎಂಬಲ್ಲಿ ಪತ್ತೆ ಹಚ್ಚಿ ಬಂಧಿಸಿದ್ದಾರೆ.
ಹೆದ್ದಾರಿ ಬದಿಯಲ್ಲಿ ನಿಲ್ಲಿಸಲಾಗಿದ್ದ ವಾಹನಗಳಿಂದ ಬ್ಯಾಟರಿಗಳನ್ನು ಸರಣಿ ಕಳವುಗೈದ ಪ್ರಕರಣ ನಡೆದು ವಾಹನ ಮಾಲಕರನ್ನು ಚಿಂತೆಗೀಡು ಮಾಡಿತ್ತು. ಈ ಬಗ್ಗೆ ಪ್ರಕರಣವನ್ನು ದಾಖಲಿಸಿದ್ದ ಉಪ್ಪಿನಂಗಡಿ ಪೊಲೀಸರು ಕೇರಳದ ಚೆರ್ಕಳ ನಿವಾಸಿ ಶಮೀರ್ (50) ಎಂಬಾತನನ್ನು ದಸ್ತಗಿರಿ ಮಾಡಿ ವಿಚಾರಣೆಗೆ ಒಳಪಡಿಸಿದಾಗ ತಾನೇ ಬ್ಯಾಟರಿಗಳನ್ನು ಕದ್ದಿರುವುದಾಗಿ ತಪ್ಪೊಪ್ಪಿಕೊಂಡಿರುತ್ತಾನೆ.




