November 19, 2026

ವಿಟ್ಲ: ರಸ್ತೆ ಬದಿಯ ಕಂದಕಕ್ಕೆ ಉರುಳಿದ ಕಾರು:
ಅಳಿಕೆ ಗ್ರಾ.ಪಂ ಉಪಾಧ್ಯಕ್ಷ ಪಾರು

0
IMG-20211231-WA0007.jpg

ವಿಟ್ಲ: ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಕಂದಕ್ಕೆ ಉರುಳಿದ ಘಟನೆ ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಮುಳಿಯ ಎಂಬಲ್ಲಿ ಇಂದು ನಡೆದಿದೆ.

ಇಂದು ಬೆಳಗ್ಗೆ ವಿಟ್ಲ ಕಡೆಯಿಂದ ಪೆರುವಾಯಿ ಕಡೆಗೆ ತೆರಳುತ್ತಿದ್ದ ಕಾರು ಮುಳಿಯ ಶಾಲೆಯ ಬಳಿ ನಿಯಂತ್ರಣ ತಪ್ಪಿ ರಸ್ತೆ ಬದಿ ಕಂದಕಕ್ಕೆ ಉರುಳಿ ಬಿದ್ದಿದೆ.

ಘಟನೆಯಲ್ಲಿ ಅಳಿಕೆ ಗ್ರಾಮ ಪಂಚಾಯತ್‌ ಸದಸ್ಯ ಜಗದೀಶ್‌ ಶೆಟ್ಟಿ ಅವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You may have missed

error: Content is protected !!