June 26, 2026

ಬೆಳ್ತಂಗಡಿ: ಬಾಲಕಿಗೆ ಲೈಂಗಿಕ ಕಿರುಕುಳ: ಇಬ್ಬರು ಬಾಲಕರ ವಿರುದ್ಧ ಪ್ರಕರಣ ದಾಖಲು

0
IMG-20260625-WA0043

ಬೆಳ್ತಂಗಡಿ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಕುರಿತು ಇಬ್ಬರು ಬಾಲಕರ ವಿರುದ್ಧ ವೇಣೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಬ್ಬರು ಬಾಲಕರು ಜೊತೆಗೂಡಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳಲ್ಲಿ ಓರ್ವನನ್ನು (16 ವರ್ಷ) ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನೋರ್ವ ಆರೋಪಿ ಬಾಲಕ (17 ವರ್ಷ) ಪರಾರಿಯಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬಾಲಕರಿಬ್ಬರು ಸೇರಿ 2023ರಲ್ಲಿ ಬೆಳ್ತಂಗಡಿಯಲ್ಲಿರುವ ಡ್ಯಾಂ ಒಂದರ ಬಳಿಗೆ ಬಾಲಕಿಯನ್ನು ಕರೆದುಕೊಂಡು ಹೋಗಿ ಕಿರುಕುಳ ನೀಡಿ ಜೀವ ಬೆದರಿಕೆ ಒಡ್ಡಿರುವುದಾಗಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ. ವೇಣೂರು ಪೊಲೀಸ್ ಠಾಣೆಯಲ್ಲಿ ಕಲಂ 376, 376AB, 376DB, 506 ಜೊತೆಗೆ 34 IPC ಮತ್ತು ಕಲಂ 6 ಪೋಕ್ಸೋ ಕಾಯಿದೆ-2012 ರಂತೆ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *

error: Content is protected !!