June 26, 2026

ಮುಲ್ಕಿ: ರೈಲು ನಿಲ್ದಾಣದ ರಸ್ತೆಯಲ್ಲಿ ಗಾಂಜಾ ಮಾರಾಟಕ್ಕೆ ಯತ್ನ: ಉಳ್ಳಾಲ ಮೂಲದ ಆರೋಪಿಯ ಬಂಧನ

0
image_editor_output_image-1268677361-1782453437324

ಮಂಗಳೂರು : ಮುಲ್ಕಿ ಪೊಲೀಸ್‌ ಠಾಣಾ ವ್ಯಾಪ್ತಿಯ ಕಿಲ್ಪಾಡಿ ಗ್ರಾಮದ ರೈಲು ನಿಲ್ದಾಣದ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತಿದ್ದ ಆರೋಪಿಯನ್ನು ಪಣಂಬೂರು ಎಸಿಪಿ ತಂಡ ಹಾಗೂ ಮುಲ್ಕಿ ಠಾಣೆಯ ಪೊಲೀಸ್ ತಂಡ ಬಂಧಿಸಿ 2 ಲಕ್ಷ ರೂಪಾಯಿ ಮೌಲ್ಯದ 4 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಂಡಿದೆ.

ಉಳ್ಳಾಲ ತಾಲೂಕಿನ ಕೋಟೆಕಾರ್ ಗ್ರಾಮದ ಮುಳ್ಳುಗುಡ್ಡೆ ನಿವಾಸಿ 50 ವರ್ಷ ಪ್ರಾಯದ ಅಬ್ಬಾಸ್ ಬಂಧಿತ ಆರೋಪಿಯಾಗಿದ್ದಾನೆ.

ಆರೋಪಿಯ ವಿರುದ್ಧ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈತ ಹಳೆ ಆರೋಪಿಯಾಗಿದ್ದು, ಈ ಹಿಂದೆ ಈತನ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು.

Leave a Reply

Your email address will not be published. Required fields are marked *

error: Content is protected !!