June 27, 2026

ವಿಟ್ಲ: ಮಂಗಳಪದವು ಬಸ್ ನಿಲ್ದಾಣದಲ್ಲಿ ಅಕ್ರಮ ಮದ್ಯ ಮಾರಾಟ: ವಿಟ್ಲ ಪೊಲೀಸರಿಂದ ದಾಳಿ

0
IMG-20220615-WA0046

ವಿಟ್ಲ: ವಿಟ್ಲ ಠಾಣಾ ವ್ಯಾಪ್ತಿಯ ಮಂಗಳಪದವು ಬಸ್ ನಿಲ್ದಾಣದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ವಿಟ್ಲ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ.

ವಿಟ್ಲ ಕಸಬಾ ನಿವಾಸಿ ಲಕ್ಷ್ಮಣಗೌಡ (54) ವಿರುದ್ಧ ಪ್ರಕರಣ ದಾಖಲಾಗಿದೆ.

ವಿಟ್ಲದ ಮಂಗಿಲಪದವು ಬಸ್ ತಂಗುದಾಣದ ಬಳಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಮೇರೆಗೆ ವಿಟ್ಲ ಪೊಲೀಸ್ ಇನ್ಸ್ ಪೆಕ್ಟರ್ ಪ್ರಕಾಶ್ ದೇವಾಡಿಗ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ವ್ಯಕ್ತಿಯೋರ್ವನು ಮಂಗಿಲಪದವು ಬಸ್ ತಂಗುದಾಣದ ಬಳಿ ಅನುಮಾನಾಸ್ಪದವಾಗಿ ಕಂಡುಬಂದಿದ್ದು ಆತನನ್ನು ಹಿಡಿದು ವಿಚಾರಿಸಿದಾಗ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ಆತನ ಬಳಿಯಿದ್ದ ಚೀಲವನ್ನು ತಪಾಸಣೆ ನಡೆಸಿದಾಗ ವಿವಿಧ ಮಾದರಿಯ ಒಟ್ಟು 4.5 ಲೀಟರ್‌ ಮದ್ಯ ಹಾಗೂ ಮದ್ಯ ಮಾರಾಟದಿಂದ ಸಂಗ್ರಹವಾದ 300 ರೂಪಾಯಿ ಪತ್ತೆಯಾಗಿರುತ್ತದೆ. ಈ ಬಗ್ಗೆ ವಿಚಾರಿಸಿದಾಗ ಆರೋಪಿಯು ಯಾವುದೇ ಪರವಾನಿಗೆ ಇಲ್ಲದೇ ಗಿರಾಕಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಸಲುವಾಗಿ ತನ್ನ ಸ್ವಾಧೀನದಲ್ಲಿರಿಸಿಕೊಂಡಿರುವುದಾಗಿ ದೃಢಪಟ್ಟಿದ್ದು, ಮದ್ಯವನ್ನು ಸ್ವಾಧೀನಪಡಿಸಿ, ಆರೋಪಿಯ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 141/2026, ಕಲಂ: 15, 32, 34 KARNATAKA EXCISE ACT, 1965 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!