August 12, 2026

ವಿಟ್ಲ: ಕಾರು ಮತ್ತು ಸ್ಕೂಟರ್ ನಡುವೆ ಅಪಘಾತ: ಸವಾರ ಗಂಭೀರ ಗಾಯ-ಆಸ್ಪತ್ರೆಗೆ ದಾಖಲು

0
image_editor_output_image-402848658-1782622683520

ವಿಟ್ಲ: ವಿಟ್ಲ-ಸಾಲೆತ್ತೂರು ರಸ್ತೆಯ ಕೊಡಂಗಾಯಿ ಕಾಪುಮಜಲು ಎಂಬಲ್ಲಿ ಇಂದು ಬೆಳಿಗ್ಗೆ ಎರ್ಟಿಗಾ ಕಾರು ಹಾಗೂ ಹೋಂಡಾ ಡಿಯೋ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.
ಸಾಲೆತ್ತೂರು ಕಡೆಗೆ ಚಲಿಸುತ್ತಿದ್ದ ಎರ್ಟಿಗಾ ಕಾರು
ಈ ವೇಳೆ ಎದುರಿನಿಂದ ಬರುತ್ತಿದ್ದ ಹೋಂಡಾ ಡಿಯೋ ಸ್ಕೂಟರ್‌ಗೆ ಕಾರು ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ರಸ್ತೆ ಬದಿಯ ಚರಂಡಿಗೆ ಇಳಿದು ನಿಂತಿದೆ.

ಅಪಘಾತದ ತೀವ್ರತೆಗೆ ಹೋಂಡಾ ಡಿಯೋ ಸ್ಕೂಟರ್ ಸಂಪೂರ್ಣವಾಗಿ ಜಖಂಗೊಂಡಿದ್ದು, ಸವಾರನಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಅಪಘಾತ ನಡೆದ ತಕ್ಷಣ ಸ್ಥಳೀಯರು ಧಾವಿಸಿ ಬಂದು, ಗಾಯಾಳುವನ್ನು ಅಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಿದ್ದಾರೆ. ಗಾಯಗೊಂಡ ಸವಾರ ಮುಡಿಪು ಕಡೆಯವರೆಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!