ಬೆಳ್ತಂಗಡಿ: ಕಾಲೇಜ್ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ
ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಮಠ ಸಮೀಪದ ಕುಂಭರೋಡಿ ನಿವಾಸಿ ಹಾಗೂ ಬೆಳ್ತಂಗಡಿ ಸರ್ಕಾರಿ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿನಿ ನಿಖಿತಾ (19) ಅವರು ಜುಲೈ 1ರಂದು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.




