July 1, 2026

ದ.ಕ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆ: ನಿಯಮ ಉಲ್ಲಂಘಿಸಿ ತರಗತಿ ನಡೆಸಿದರೆ ಕಠಿಣ ಕಾನೂನು ಕ್ರಮ: ಜಿಲ್ಲಾಧಿಕಾರಿ

0
image_editor_output_image599752964-1782911484358

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಭಾರಿ ಮಳೆಯ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಜುಲೈ 2, 2026ರಂದು ಜಿಲ್ಲೆಯ ಎಲ್ಲಾ ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಶಾಲೆಗಳು ಮತ್ತು 12ನೇ ತರಗತಿವರೆಗಿನ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.

ಆದರೆ, ಕೆಲವು ಖಾಸಗಿ ಶಾಲೆಗಳು, ಕಾಲೇಜುಗಳು ಹಾಗೂ ಶೈಕ್ಷಣಿಕ ಸಂಸ್ಥೆಗಳು ನಾಳೆಯೂ ತರಗತಿಗಳನ್ನು ನಡೆಸಲಿವೆ ಎಂಬ ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದೆ.

ಈ ಕುರಿತು ಸ್ಪಷ್ಟನೆ ನೀಡಿರುವ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು, ಜಿಲ್ಲಾಡಳಿತದ ಆದೇಶವನ್ನು ಉಲ್ಲಂಘಿಸಿ ಯಾವುದೇ ಶೈಕ್ಷಣಿಕ ಸಂಸ್ಥೆ ತರಗತಿಗಳನ್ನು ನಡೆಸುತ್ತಿರುವುದು ಕಂಡುಬಂದಲ್ಲಿ, ವಿಪತ್ತು ನಿರ್ವಹಣಾ ಕಾಯ್ದೆ–2005ರ ಅನ್ವಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಪೋಷಕರು, ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಸಂಸ್ಥೆಗಳು ಜಿಲ್ಲಾಡಳಿತದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಿ, ಸುರಕ್ಷತೆಗೆ ಆದ್ಯತೆ ನೀಡುವಂತೆ ಮನವಿ ಮಾಡಲಾಗಿದೆ.

Leave a Reply

Your email address will not be published. Required fields are marked *

error: Content is protected !!