July 2, 2026

ಉಡುಪಿ: ಬಸ್ಸಿಗೆ ಇನ್ನೋವಾ ಡಿಕ್ಕಿ: ಪ್ರಸಿದ್ಧ ಹುಲಿ ವೇಷ ಕಲಾವಿದ ಮೃತ್ಯು

0
image_editor_output_image1939376902-1782963854210

ಉಡುಪಿ: ಬ್ರಹ್ಮಾವರ ಸಮೀಪದ ಹೇರೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ಸಿಗೆ ಇನ್ನೋವಾ ಡಿಕ್ಕಿಯಾಗಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರಾವಳಿಯ ಪ್ರಸಿದ್ಧ ಹುಲಿವೇಷ ಕಲಾವಿದ, ಉಡುಪಿಯ ಸಂತೆಕಟ್ಟೆ ಲಕ್ಷ್ಮೀನಗರ ನಿವಾಸಿ ಮಂಜುನಾಥ್ (43) ಸಾವನ್ನಪ್ಪಿದರುವ ಘಟನೆ ನಡೆದಿದೆ.

ಗೋವಾಕ್ಕೆ ತೆರಳಿದ್ದ ಅವರು ನಾಲ್ವರು ಸ್ನೇಹಿತರ ಜೊತೆಗೆ ಇನ್ನೋವಾ ಕಾರಿನಲ್ಲಿ ಉಡುಪಿಗೆ ಹಿಂದಿರುಗುತ್ತಿದ್ದ ಸಂದರ್ಭ ಹೇರೂರಿನ ರುಡ್‌ಸೆಟ್ ಕ್ರಾಸ್ ಸಮೀಪ ಉಡುಪಿ ಕಡೆಗೆ ಸಾಗುತ್ತಿದ್ದ ಖಾಸಗಿ ಬಸ್ ಚಾಲಕ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ಇನ್ನೋವಾ ಕಾರು ನಿಯಂತ್ರಣ ತಪ್ಪಿ ಬಸ್‌ ಗೆ ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡ ಮಂಜುನಾಥ್ ಸ್ಥಳದಲ್ಲೇ ಮೃತಪಟ್ಟಿದ್ದು ಕಾರಿನಲ್ಲಿದ್ದ ಇತರ ನಾಲ್ವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಜುನಾಥ್ ಹೆಸರಾಂತ ಹುಲಿವೇಷ ಕಲಾವಿದರಾಗಿದ್ದರು.

Leave a Reply

Your email address will not be published. Required fields are marked *

error: Content is protected !!