July 2, 2026

ಬೆಳ್ತಂಗಡಿ: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

0
image_editor_output_image-1723484638-1782964962865

ಬೆಳ್ತಂಗಡಿ : ಸುಮಾರು 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಶ್ರೀನಿವಾಸ (35) ಎಂಬಾತನನ್ನು ಆಂಧ್ರ ಪ್ರದೇಶದ ಚಿತ್ತೂರು ಎಂಬಲ್ಲಿ ಧರ್ಮಸ್ಥಳ ಪೊಲೀಸರು ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಬೆಳ್ತಂಗಡಿ ನ್ಯಾಯಲಯ CC No. 597/2017 CR NO. 169/2016. ಕಲಂ, 379, 201 ಐಪಿಸಿ (ಕಾರಿನಿಂದ ಎ.ಟಿ.ಎಂ ಕಾರ್ಡ್ ಕಳ್ಳತನ ಮಾಡಿ ಹಣ ಡ್ರಾಂ ಮಾಡಿದ) ಪ್ರಕರಣದಲ್ಲಿ ಸುಮಾರು 9 ವರ್ಷಗಳಿಂದ ತಲೆಮರೆಸಿ ಕೊಂಡಿದ್ದ ವಾರಂಟ್ ಆರೋಪಿ ಆಂಧ್ರಪ್ರದೇಶ ಚಿತ್ತೂರು ಜಿಲ್ಲೆ ಕವಲಗುಂಟ, ಪೆನಮೂರು ನಿವಾಸಿ ಶ್ರೀನಿವಾಸನನ್ನು ಬೆಳ್ತಂಗಡಿ ಪೊಲೀಸ್ ಉಪ ವಿಭಾಗದ ಡಿವೈಎಸ್ಪಿ ರೋಹಿಣಿ ಸಿ ಕೆ ಮಾರ್ಗದರ್ಶನದಲ್ಲಿ ಪೊಲೀಸ್ ವೃತ್ತ ನಿರೀಕ್ಷಕರಾದ ರವಿ ಬಿ ಎಸ್ ನೇತೃತ್ವದ ತಂಡ ಜೂ.30 ರಂದು ಆಂಧ್ರಪ್ರದೇಶದ ಚಿತ್ತೂರು ಎಂಬಲ್ಲಿಂದ ದಸ್ತಗಿರಿ ಮಾಡಿ ಜು.1 ರಂದು ನ್ಯಾಯಾಧಿಶರ ಮುಂದೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!