July 2, 2026

ಉಡುಪಿ: ಖಾಸಗಿ ಬಸ್ ನ ಹಿಂಭಾಗದ ಏಣಿಯಲ್ಲಿ ನೇತಾಡಿಕೊಂಡು ವಿದ್ಯಾರ್ಥಿಗಳ ಪ್ರಯಾಣ: ವೀಡಿಯೋ ವೈರಲ್

0
image_editor_output_image1622202842-1782969869550

ಉಡುಪಿ: ಖಾಸಗಿ ಬಸ್ ನ ಹಿಂಭಾಗದ ಏಣಿಯಲ್ಲಿ ವಿದ್ಯಾರ್ಥಿಗಳು ನೇತಾಡಿಕೊಂಡು ಪ್ರಯಾಣಿಸುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವೈರಲ್ ಆಗಿರುವ ವಿಡಿಯೋ ಉಡುಪಿ ಜಿಲ್ಲೆಯ ಹರಿಕಂಡಿಗೆ–ಪೆರ್ಡೂರು ಮಾರ್ಗದಲ್ಲಿ ಸಂಚರಿಸುವ ಖಾಸಗಿ ಬಸ್‌ನದ್ದು ಎಂದು ಹೇಳಲಾಗುತ್ತಿದೆ.

ಬಸ್‌ನಲ್ಲಿ ಅತಿಯಾದ ಜನಸಂದಣಿ ಇದ್ದ ಹಿನ್ನೆಲೆಯಲ್ಲಿ ಕೆಲ ವಿದ್ಯಾರ್ಥಿಗಳು ಬಸ್ ನ ಹಿಂಭಾಗದಲ್ಲಿರುವ ಏಣಿಯಲ್ಲಿ ನೇತಾಡಿಕೊಂಡೇ ಪ್ರಯಾಣಿಸುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.

ವಿದ್ಯಾರ್ಥಿಗಳ ಈ ಅಪಾಯಕಾರಿ ಪ್ರಯಾಣದ ಕುರಿತು ಸಾರ್ವಜನಿಕರು ಕಳವಳ ವ್ಯಕ್ತಪಡಿಸಿದ್ದು, ಯಾವುದೇ ಅನಾಹುತ ಸಂಭವಿಸುವ ಮುನ್ನ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಾರಿಗೆ ಇಲಾಖೆ ಈ ಬಗ್ಗೆ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!