ಬೆಂಗಳೂರು: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರು ಮೃತಪಟ್ಟ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣ ಗ್ರಾಮದ ಬಳಿ ನಡೆದಿದೆ.
ಘಟನೆಯಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರೆಲ್ಲರೂ ಕೂಲಿ ಕಾರ್ಮಿಕರಾಗಿದ್ದು, ಕ್ರಷರ್ ಬಳಿಯೇ ವಾಸಿಸುತ್ತಿದ್ದರು ಎನ್ನಲಾಗಿದೆ.