July 2, 2026

ಬೋಳಂತೂರು: ನಾಗರಹಾವು ಕಡಿದು ಆಟೋ ಚಾಲಕ ಹಸೈನಾರ್ ಮೃತ್ಯು

0
image_editor_output_image672585564-1782998468583

ವಿಟ್ಲ: ನಾಗರಹಾವು ಕಡಿದ ಪರಿಣಾಮ ಆಟೋ ಚಾಲಕರೊಬ್ಬರು ದಾರಿಮಧ್ಯೆ ಕೊನೆಯುಸಿರೆಳೆದ ದಾರುಣ ಘಟನೆ ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಸೆರ್ಕಳ ಕದ್ಕಾರ್ ಎಂಬಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.

ಸೆರ್ಕಳ ಕದ್ಕಾರ್ ನಿವಾಸಿ ಸುಲೈಮಾನ್ ಎಂಬವರ ಪುತ್ರ, ಆಟೋ ಚಾಲಕ ಹಸೈನಾರ್ (50) ಮೃತಪಟ್ಟ ದುರ್ದೈವಿ.

ಬೆಳಿಗ್ಗೆ ಹಸೈನಾರ್ ಅವರು ತನ್ನ ಮನೆಯ ಬದಿಯಲ್ಲಿ ಇಟ್ಟಿದ್ದ ಹುಲ್ಲು ತೆಗೆಯುವ ಯಂತ್ರವನ್ನು ಕೈಯಿಂದ ಎತ್ತಲು ಮುಂದಾಗಿದ್ದಾರೆ. ಈ ವೇಳೆ ಯಂತ್ರದ ಅಡಿಯಲ್ಲಿ ಅವಿತುಕೊಂಡಿದ್ದ ನಾಗರಹಾವು ಏಕಾಏಕಿ ಅವರಿಗೆ ಕಡಿದಿದೆ. ತಕ್ಷಣವೇ ತೀವ್ರ ಅಸ್ವಸ್ಥಗೊಂಡ ಅವರನ್ನು ಸ್ಥಳೀಯರು ಕಲ್ಲಡ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು.

ಆದರೆ, ಅಲ್ಲಿನ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಕಂಕನಾಡಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಹಸೈನಾರ್ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!