July 3, 2026

ವಿಟ್ಲ: ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಕುಡ್ತಮುಗೇರು ಜುಬೈರ್  ಬಂಧನ: ಸಾರ್ವಜನಿಕರಿಂದ ಬ್ಯಾಂಕ್ ಖಾತೆಗಳನ್ನು ಪಡೆದು ವಂಚನೆ

0
IMG-20260703-WA0146

ವಿಟ್ಲ: ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ದಕ್ಷಿಣ  ಕನ್ನಡ ಜಿಲ್ಲಾ ಸೈಬರ್‌  ಅಪರಾಧ ಪೊಲೀಸ್ ಠಾಣಾ ಡಿಜಿಟಲ್ ಅರೆಸ್ಟ್ ಪ್ರಕರಣ) ಪ್ರಕರಣದಲ್ಲಿ ಸೈಬರ್ ಅಪರಾಧಕ್ಕೆ ಸಾರ್ವಜನಿಕರಿಂದ ಬ್ಯಾಂಕ್ ಖಾತೆಗಳನ್ನು ಪಡೆದು, ಸೈಬರ್ ವಂಚನೆಯ ಹಣದ ವಹಿವಾಟಿಗೆ  ನೀಡಿ ಸಹಕರಿಸುತ್ತಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಕೊಳ್ನಾಡು ಕುಡ್ತಮುಗೇರು ನಿವಾಸಿ ಜುಬೈರ್ (32) ಬಂಧಿತ ಆರೋಪಿ

ಜಿಲ್ಲಾ ಸೈಬರ್‌  ಅಪರಾಧ ಠಾಣೆಯ ಪೊಲೀಸರು ಬಂಧಿಸಿ  ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ  ನ್ಯಾಯಾಂಗ ಬಂಧನಕ್ಕೆ ವಿಧಿಸಿದೆ.

ವಿಚಾರಣೆಯ ವೇಳೆ ಸದ್ರಿ ಆರೋಪಿಯ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ 01 ಪ್ರಕರಣ ( ಅ.ಕ್ರ 180/2022) ಸೇರಿದಂತೆ ರಾಜ್ಯದ ಬೇರೆ ಬೇರೆ ಠಾಣೆಗಳಲ್ಲಿ ಒಟ್ಟು 04 ಪ್ರಕರಣಗಳು ದಾಖಲಾಗಿರುವ ಬಗ್ಗೆ ಹಾಗೂ ಆರೋಪಿಯು ಹಲವು ಪ್ರಕರಣಗಳಲ್ಲಿ ಮಾನ್ಯ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ, ದಸ್ತಗಿರಿಗೆ ಸಿಗದೇ ತಲೆ ಮರೆಸಿಕೊಂಡಿರುವುದು ತಿಳಿದುಬಂದಿರುತ್ತದೆ.

Leave a Reply

Your email address will not be published. Required fields are marked *

You may have missed

error: Content is protected !!