ಉಪ್ಪಿನಂಗಡಿ: ಆಸಿಡ್ ಸೇವಿಸಿ ವ್ಯಕ್ತಿ ಆತ್ಮಹತ್ಯೆ
ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಶಿರಾಡಿ ಗ್ರಾಮದ ಪೌವತ್ತಿಲ್ ಪದಂಬಳ ನಿವಾಸಿ ಪಿ.ವಿ. ಜೋಸ್ (64) ಅವರು ಆಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.
ಸುಮಾರು ಎರಡು ತಿಂಗಳ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಅವರು, ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಸಮಸ್ಯೆಯಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದರೆಂದು ತಿಳಿದುಬಂದಿದೆ. ಗುರುವಾರ ರಬ್ಬರ್ ಕೃಷಿಗಾಗಿ ತಂದಿಟ್ಟಿದ್ದ ಆಸಿಡ್ ಸೇವಿಸಿದ್ದರಿಂದ ಅಸ್ವಸ್ಥಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಈ ಸಂಬಂಧ ಮೃತರ ಪತ್ನಿ ನೀಡಿದ ದೂರಿನ ಆಧಾರದ ಮೇಲೆ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.




