ಕೇರಳ ರಾಜ್ಯದಲ್ಲಿ ಇಂದು 40 ಒಮಿಕ್ರಾನ್ ದೃಢ: ರಾಜ್ಯದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 107 ಕ್ಕೆ ಏರಿಕೆ
ತಿರುನಂತಪುರ: ಕೇರಳದಲ್ಲಿ ಕೊರೊನಾ ವೈರಸ್‌ನ ರೂಪಾಂತರ ತಳಿ ‘ಓಮಿಕ್ರಾನ್’ ದೃಢಪಟ್ಟ 44 ಪ್ರಕರಣಗಳು ದಾಖಲಾಗಿವೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ.
ಇದರೊಂದಿಗೆ ರಾಜ್ಯದಲ್ಲಿ ಓಮೈಕ್ರಾನ್ ದೃಢಪಟ್ಟ ಪ್ರಕರಣಗಳ ಸಂಖ್ಯೆ 107 ಕ್ಕೆ ಏರಿಕೆಯಾಗಿದೆ.
ಕೇರಳದಲ್ಲಿ ಗುರುವಾರ 2,423 ಹೊಸ ಕೋವಿಡ್ ಪ್ರಕರಣ ದಾಖಲಾಗಿದ್ದು, 15 ಮಂದಿ ಸೋಂಕಿತರು ಮೃತಪಟ್ಟಿದ್ದರು. ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ ಸದ್ಯ ಕೇರಳದಲ್ಲಿ 19,835 ಕೋವಿಡ್ ಸಕ್ರಿಯ ಪ್ರಕರಣಗಳಿವೆ.
ದೇಶದಲ್ಲಿ ಶುಕ್ರವಾರ ಒಂದೇ ದಿನ 309 ಹೊಸ ಓಮೈಕ್ರಾನ್ ಪ್ರಕರಣಗಳು ದಾಖಲಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 1,270 ಕ್ಕೆ ಹೆಚ್ಚಳವಾಗಿದೆ. ಜತೆಗೆ, 24 ಗಂಟೆಗಳ ಅವಧಿಯಲ್ಲಿ 16,764 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 220 ಮಂದಿ ಸಾವಿಗೀಡಾಗಿದ್ದಾರೆ. ಸದ್ಯ ದೇಶದಲ್ಲಿ 91,361 ಸಕ್ರಿಯ ಪ್ರಕರಣಗಳಿವೆ.